ಹಣಕಾಸು ವರ್ಷ ಬದಲಾವಣೆ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಕೇಂದ್ರ ಸರ್ಕಾರ
ಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ.

ನವದೆಹಲಿ: ಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ. ಪ್ರಸ್ತುತ ಹಣಕಾಸು ವರ್ಷ ಏಪ್ರಿಲ್ 1 ರಿಂದ ಪ್ರಾರಂಭವಾಗಿ ಅದರ ಮಾರ್ಚ್ 31 ಕ್ಕೆ ಅಂತ್ಯಗೊಳ್ಳಲಿದೆ.
ಆದರೆ ಪ್ರಸ್ತುತ ಇರುವ ಹಣಕಾಸು ವರ್ಷವನ್ನು ಜನವರಿ 1 ರಿಂದ ಡಿಸೆಂಬರ್ ಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹಣಕಾಸು ವರ್ಷವನ್ನು ಜನವರಿಂದ 1 ರಿಂದ ಡಿಸೇಂಬರ್ 31 ಕ್ಕೆ ವರ್ಗಾಯಿಸುವ ವಿಷಯದಲ್ಲಿ ಸಾರ್ವಜನಿಕರಿಂದಲೇ ಸಲಹೆ-ಸೂಚನೆಗಳನ್ನು ಪಡೆಯಲು ಮುಂದಾಗಿದೆ.
ಹೊಸ ಆರ್ಥಿಕ ವರ್ಷದ ಕುರಿತು ಮೈ ಗೌರ್ನಮೆಂಟ್ ವೆಬ್ ಸೈಟ್ ಮೂಲಕ ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ. ಹಣಕಾಸು ವರ್ಷವನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದ್ದು, ಬಜೆಟ್ ಮಂಡನೆ ವೇಳೆ ಮುಂಗಾರು ಪ್ರಮಾಣ ಸೇರಿದಂತೆ ಹಲವು ಅಂಶಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಹೊಸ ಆರ್ಥಿಕ ವರ್ಷವನ್ನು ನಿರ್ಧರಿಸುವುದಕ್ಕಾಗಿ ಕೇಂದ್ರ ಸರ್ಕಾರ ಮುಖ್ಯ ಹಣಕಾಸು ಸಲಹೆಗಾರ ಶಂಕರ್ ಆಚಾರ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


