ಪ್ರಧಾನ ಸುದ್ದಿ

2017 ರ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನದ್ದೇ ಗೆಲುವು: ಶೀಲಾ ದೀಕ್ಷಿತ್

ಉತ್ತರಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಕಾಂಗ್ರೆಸ್ ರಚಿಸುತ್ತದೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಬುಧವಾರ ಹೇಳಿದ್ದಾರೆ.

2017 ರ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ನದ್ದೇ ಗೆಲುವು: ಶೀಲಾ ದೀಕ್ಷಿತ್
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್
Published On :
ಅಲ್ಲಹಾಬಾದ್: ಉತ್ತರಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಕಾಂಗ್ರೆಸ್ ರಚಿಸುತ್ತದೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಬುಧವಾರ ಹೇಳಿದ್ದಾರೆ. 
ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಕಳೆದ 27 ವರ್ಷಗಳಿಂದ ಜಾತೀಯತೆ ಮತ್ತು ಕೋಮುವಾದಿ ಸಂಘಟನೆಗಳಿಂದ ಉತ್ತರಪ್ರದೇಶ ನಾಶವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಮಾತ್ರ ಅಭಿವೃದ್ಧಿ ಪರ ಇದ್ದು, ರಾಜ್ಯದ ಪ್ರಗತಿ ಮತ್ತು ಸಂಪತ್ತಿಗೆ ಶ್ರಮಿಸಲಿದೆ ಎಂದು ಕೂಡ ಹೇಳಿದ್ದಾರೆ. 
ಉತ್ತರಪ್ರದೇಶದಲ್ಲಿ ಉದ್ದಿಮೆ ಮತ್ತು ವ್ಯವಹಾರ ಕೂಡ ದಯನೀಯ ಸ್ಥಿತಿಯಲ್ಲಿದೆ ಎಂದಿರುವ ಶೀಲಾ ದೀಕ್ಷಿತ್, ಅಭಿವೃದ್ಧಿ ಪರ ಸರ್ಕಾರವಷ್ಟೇ ರಾಜ್ಯವನ್ನು ಉಳಿಸಲು ಸಾಧ್ಯ ಎಂದಿದ್ದಾರೆ. 
ಬಿಜೆಪಿ, ಬಿ ಎಸ್ ಪಿ ಮತ್ತು ಎಸ್ ಪಿ ಪಕ್ಷಗಳಿಂದ ಜನ ಬೇಸತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಎಂದು ಕೂಡ ದೀಕ್ಷಿತ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.