ಪ್ರಧಾನ ಸುದ್ದಿ

ಕ್ಷುಲ್ಲಕ ರಾಜಕೀಯಕ್ಕೆ ಸೇನೆಯನ್ನು ಎಳೆಯಬೇಡಿ: ಸಚಿನ್ ಪೈಲಟ್

ರಾಜಕೀಯಕ್ಕೆ ಸೇನೆಯನ್ನು ಎಳೆಯದಂತೆ ರಾಜಕೀಯ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟೋಲ್ ಪ್ಲಾಜಾಗಳಲ್ಲಿ ಸೈನಿಕರನ್ನು ನಿಯೋಜಿಸಿದ್ದ ನಡೆ ನೆನ್ನೆ

ಕ್ಷುಲ್ಲಕ ರಾಜಕೀಯಕ್ಕೆ ಸೇನೆಯನ್ನು ಎಳೆಯಬೇಡಿ: ಸಚಿನ್ ಪೈಲಟ್
ಪಶ್ಚಿಮ ಬಂಗಾಳದಲ್ಲಿ ಟೋಲ್ ಪ್ಲಾಜಾಗಳಲ್ಲಿ ನಿಯೋಜಿಸಲಾಗಿದ್ದ ಸೇನೆ
Published On :
ಕೋಲ್ಕತ್ತಾ: ರಾಜಕೀಯಕ್ಕೆ ಸೇನೆಯನ್ನು ಎಳೆಯದಂತೆ ರಾಜಕೀಯ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟೋಲ್ ಪ್ಲಾಜಾಗಳಲ್ಲಿ ಸೈನಿಕರನ್ನು ನಿಯೋಜಿಸಿದ್ದ ನಡೆ ನೆನ್ನೆ ವಿವಾದಕ್ಕೆ ಎಡೆಮಾಡಿಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಪ್ರತಿಕ್ರಿಯಿಸಿದ್ದಾರೆ. 
ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಪಕ್ಷಗಳೆರಡಕ್ಕೂ ತಾಕೀತು ಮಾಡಿರುವ ಪೈಲಟ್ ಕ್ಷುಲ್ಲಕ ರಾಜಕೀಯಕ್ಕೆ ಸೇನಾಪಡೆಗಳನ್ನು ಎಳೆದುತರಬೇಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. 
"ಸೇನೆಯನ್ನು ರಾಜಕೀಯಕ್ಕೆ ಎಳೆಯಬಾರದು. ದೇಶಕ್ಕಾಗಿ ಸೇನೆ ಹೋರಾಡುತ್ತದೆ, ಮತ್ತು ನಮ್ಮ ದೇಶದ ಭದ್ರತೆಗೆ ಮತ್ತು ಸುರಕ್ಷತೆಗಾಗಿ ಅವರು ಜೀವನವನ್ನೇ ತ್ಯಾಗ ಮಾಡುತ್ತಾರೆ" ಎಂದು ಪೈಲಟ್ ಹೇಳಿದ್ದಾರೆ. 
"ರಾಜ್ಯಕ್ಕೆ ಸೂಚನೆ ನೀಡದೆ ಸೇನೆ ಅಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಭದ್ರತಾ ಸಚಿವ ಹೇಳಿಕೆ ನೀಡಬೇಕು ಮತ್ತು ರಾಜ್ಯಕ್ಕೆ ಮಾಹಿತಿ ತಿಳಿಸಿ ಸೇನೆ ಅಲ್ಲಿ ತಪಾಸಣೆ ನಡೆಸಿದ್ದರೆ ರಾಜ್ಯ ಸರ್ಕಾರ ಸ್ಪಷ್ಟೀಕರಣ ನೀಡಬೇಕು" ಎಂದು ಮಾಜಿ ಕೇಂದ್ರ ಮಂತ್ರಿ ಹೇಳಿದ್ದಾರೆ. 
ಸೇನೆ ತಪಾಸಣೆ ನಡೆಸುತ್ತಿದ್ದ ವಿಷಯವಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರಲ್ಲದೆ, ಸಂಸತ್ತಿನಲ್ಲಿ ವಿಪಕ್ಷಗಳು ಸ್ಪಷ್ಟೀಕರಣಕ್ಕಾಗಿ ಆಗ್ರಹಿಸಿದ್ದವು. 
ಲೋಕಸಭೆಯಲ್ಲಿ ಉತ್ತರಿಸಿದ್ದ ಭದ್ರತಾ ಸಚಿವ ಮನೋಹರ್ ಪರ್ರಿಕರ್ 'ಪಶ್ಚಿಮಬಂಗಾಳದಲ್ಲಿ ಸೇನೆ ಮಾಮೂಲಿ ತಾಲೀಮು ನಡೆಸುತ್ತಿತು" ಎಂದು ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.