ಶ್ರೀನಗರದಲ್ಲಿ ಯಾಸಿನ್ ಮಲಿಕ್ ಬಂಧನ
ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲು ಪ್ರತ್ನಿಸುತ್ತಿದ್ದಾಗ, ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆ ಕೆ ಎಲ್ ಎಫ್) ಮುಖ್ಯಸ್ಥ ಮುಹಮ್ಮದ್ ಯಾಸಿನ್ ಮಲಿಕ್ ಅವರನ್ನು ಶುಕ್ರವಾರ ಶ್ರೀನಗರದಲ್ಲಿ

Published On :
ಶ್ರೀನಗರ: ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲು ಪ್ರತ್ನಿಸುತ್ತಿದ್ದಾಗ, ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆ ಕೆ ಎಲ್ ಎಫ್) ಮುಖ್ಯಸ್ಥ ಮುಹಮ್ಮದ್ ಯಾಸಿನ್ ಮಲಿಕ್ ಅವರನ್ನು ಶುಕ್ರವಾರ ಶ್ರೀನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರದ ಪ್ರಾರ್ಥನೆಯ ನಂತರ ಮೈಸುಮಾ ಪ್ರದೇಶದಿಂದ ನಗರ ಕೇಂದ್ರ ಲಾಲ್ ಚೌಕ್ ವರೆಗೆ ಪ್ರತಿಭಟನಾ ರ್ಯಾಲಿಯ ಮುಂದಾಳತ್ವ ವಹಿಸಿದ್ದ ಜೆ ಕೆ ಎಲ್ ಎಫ್ ಕಾರ್ಯಕರ್ತರು ಮತ್ತು ಮಲಿಕ್ ನನ್ನು ತಡೆದ ಪೊಲೀಸರು ಮಲಿಕ್ ಅವರನ್ನು ಒಳಗೊಂಡಂತೆ ೧೨ ಕ್ಕೂ ಹೆಚ್ಚು ಜನರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಶ್ಮೀರದಲ್ಲಿ ರಾಜಕೀಯ ಖೈದಿಗಳನ್ನು ಬಿಡುಗಡೆ ಮಾಡಲು ಒತ್ತಡ ಹೇರುವಂತೆ ಮಾಡಲು ಈ ರ್ಯಾಲಿ ಆಯೋಜಿಸಲಾಗಿತ್ತು ಎಂದು ಜೆ ಕೆ ಎಲ್ ಎಫ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


