ಪ್ರಧಾನ ಸುದ್ದಿ

ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರ: ಅಪೋಲೊ ಆಸ್ಪತ್ರೆ ಪ್ರಕಟಣೆ

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರ: ಅಪೋಲೊ ಆಸ್ಪತ್ರೆ ಪ್ರಕಟಣೆ
ಸಂಗ್ರಹ ಚಿತ್ರ
Published On :

ಚೆನ್ನೈ: ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಹೃದಯಾಘಾತಕ್ಕೆ ಒಳಗಾದ ಬಳಿಕ ಇದೇ ಮೊದಲ ಬಾರಿಗೆ ಜಯಾ ಆರೋಗ್ಯದ ಕುರಿತಂತೆ ಮಾಹಿತಿ ನೀಡಿರುವ ಆಸ್ಪತ್ರೆ ಸಿಬ್ಬಂದಿಗಳು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇಂದು ಬೆಳಗ್ಗೆ ಅವರಿಗೆ ಆ್ಯಂಜಿಯೋಗ್ರಫಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಶ್ವಾಸಕೋಶಕ್ಕೆ ಮತ್ತೆ ರಕ್ತಪರಿಚಲನೆಯಾಗುವಂತೆ ಮಾಡಲಾಗಿದೆ. ಅಲ್ಲದೆ ಜಯಾ ಅವರಿಗೆ ಇಸಿಎಂಒ ಉಪಕರಣವನ್ನು ಅಳವಡಿಸಲಾಗಿದ್ದು, ದೇಹಕ್ಕೆ ಅಗತ್ಯವಾದ ಆಮ್ಲಜನಕವನ್ನು ಉಪಕರಣದ ಮೂಲಕ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಂತೆಯೇ ಲಂಡನ್ ಮೂಲದ ತಜ್ಞ ವೈದ್ಯ ರಿಚರ್ಡ್ ಬೀಲೆ ಅವರನ್ನು ಕೂಡ ಸಂಪರ್ಕಿಸಲಾಗಿದ್ದು, ಅವರಿಗೆ ಜಯಾ ಅವರ ಆರೋಗ್ಯ ಪರಿಸ್ಥಿತಿ ವಿವರಿಸಲಾಗಿದೆ. ಅವರ ಸಲಹೆ ಮೇರೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಮ್ಮ ಕಾರ್ಡಿಯೋಲಜಿಸ್ಟ್ ಗಳು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಯಲಲಿತಾ ಅವರಿಗಾಗಿ ಪ್ರಾರ್ಥಿಸಿ
ಜಯಲಲಿತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿರುವ ಆಸ್ಪತ್ರೆ ವೈದ್ಯರು ಅವರಿಗಾಗಿ ದೇವರಲ್ಲಿ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.