ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಸೇರಿ ಮೂವರ ಬಂಧನ
ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ ತ್ಯಾಗಿ ಸೇರಿದಂತೆ ಮೂವರನ್ನು...

Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ ತ್ಯಾಗಿ ಸೇರಿದಂತೆ ಮೂವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.
3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಎಸ್.ಪಿ.ತ್ಯಾಗಿ, ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತನ್ ಅವರನ್ನು ಸಿಬಿಐ ಇಂದು ದೆಹಲಿಯಲ್ಲಿ ಬಂಧಿಸಿದೆ.
ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.
ದೇಶದ ಅತಿ ಪ್ರಮುಖ ಗಣ್ಯರ ಪಯಣಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್‌ನಿಂದ 12 ಹೆಲಿಕಾಪ್ಟರ್ಗಳನ್ನು ಕೊಳ್ಳಲು 2010ರಲ್ಲಿ ಭಾರತೀಯ ವಾಯುಪಡೆ ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದರಲ್ಲಿ ಭಾರಿ ಪ್ರಮಾ ಣದ ಅವ್ಯವಹಾರ ನಡೆದಿದ್ದು, ಪ್ರತಿಸ್ಪಧಿಗಳನ್ನು ಹಣಿಯಲು ಅಗಸ್ಟಾ ವೆಸ್ಟ್ ಲ್ಯಾಂಡ್ ನೂರಾರು ಕೋಟಿ ರುಪಾಯಿ ಕಿಕ್‌ಬ್ಯಾಕ್ ನೀಡಿದೆ ಎಂಬ ಆರೋಪದ ಮೇಲೆ ಫೆಬ್ರವರಿ 12, 2013ರಲ್ಲಿ ಇಟಲಿ ಪೊಲೀಸರು ಅಗಸ್ಟಾ ವೆಸ್ಟ್ ಲ್ಯಾಂಡ್ ಮಾತೃ ಸಂಸ್ಥೆ ಫಿನ್‌ಮೆಕ್ಯಾನಿಕಾದ ಮುಖ್ಯಸ್ಥ ಜುಸೆಪ್ಪಿ ಒರ್ಸಿಯನ್ನು ಬಂಧಿಸಿದರು. ಇದಾದ ಬಳಿಕ ಹೆಲಿಕಾಪ್ಟರ್ ಖರೀದಿ ಹಗರಣ ಬಯಲಿಗೆ ಬಂದಿತು. ತಕ್ಷಣವೇ ಭಾರತದ ಅಂದಿನ ರಕ್ಷಣಾ ಸಚಿವ ಎ.ಕೆ.ಆಂಟನಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


