ಪ್ರಧಾನ ಸುದ್ದಿ

ರಾಸಲೀಲೆ ಪ್ರಕರಣ: ಮೇಟಿ ವಿರುದ್ಧದ ಆರೋಪ ಸಾಬೀತಾದರೆ ಕ್ರಮ; ಪರಮೇಶ್ವರ

ಅಬಕಾರಿ ಸಚಿವ ಎಚ್‌.ವೈ.ಮೇಟಿ ವಿರುದ್ಧದ ರಾಸಲೀಲೆ ಸಿಡಿ ಮತ್ತು ಜೀವ ಬೆದರಿಕೆ ಆರೋಪ ಸಾಬೀತಾದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್...

ರಾಸಲೀಲೆ ಪ್ರಕರಣ: ಮೇಟಿ ವಿರುದ್ಧದ ಆರೋಪ ಸಾಬೀತಾದರೆ ಕ್ರಮ; ಪರಮೇಶ್ವರ
ಜಿ.ಪರಮೇಶ್ವರ
Published On :
ಬೆಂಗಳೂರು: ಅಬಕಾರಿ ಸಚಿವ ಎಚ್‌.ವೈ.ಮೇಟಿ ವಿರುದ್ಧದ ರಾಸಲೀಲೆ ಸಿಡಿ ಮತ್ತು ಜೀವ ಬೆದರಿಕೆ ಆರೋಪ ಸಾಬೀತಾದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ ಎಂದು ಭಾನುವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ಸಚಿವರ ವಿರುದ್ಧದ ರಾಸಲೀಲೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಆ ಬಗ್ಗೆ ನನಗೆ ಇನ್ನೂ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಸಚಿವರ ಬೆಂಬಲಿಗರು ಆರ್ ಟಿಐ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಂದು ವೇಳೆ ಸಿಡಿ ಬಿಡುಗಡೆಯಾದರೆ ಅವರಿಂದ ರಾಜಿನಾಮೆ ಪಡೆಯುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಸಚಿವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು. 
ಸಚಿವರ ರಾಸಲೀಲೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಇಬ್ಬರಿಗೂ ಮೊದಲೇ ಮಾಹಿತಿ ಇದ್ದು, ಒಂದು ವೇಳೆ ಸಿಡಿ ಬಿಡುಗಡೆಯಾದರೆ ನೀವು ರಾಜಿನಾಮೆ ನೀಡಬೇಕಾಗುತ್ತದೆ ಎಂದು ಈಗಾಗಲೇ ಮೇಟಿ ಅವರಿಗೆ ಸಿಎಂ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.