ಮಮತಾ ಕ್ಷಮೆ ಕೋರಿದ ಬಂಗಾಳ ಬಿಜೆಪಿ ಅಧ್ಯಕ್ಷ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನೀಡಿದ್ದ ಪ್ರತಿಕ್ರಿಯೆಗಳಿಗೆ ರಾಜ್ಯದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕ್ಷಮೆ ಕೋರಿದ್ದಾರೆ.

Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನೀಡಿದ್ದ ಪ್ರತಿಕ್ರಿಯೆಗಳಿಗೆ ರಾಜ್ಯದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕ್ಷಮೆ ಕೋರಿದ್ದಾರೆ.
"ನಾನು ಯಾರ ಭಾವನೆಗಳನ್ನು ಘಾಸಿಗೊಳಿಸಲು ಇಚ್ಚಿಸಿರಲಿಲ್ಲ. ನನ್ನ ಪ್ರತಿಕ್ರಿಯೆಯಿಂದ ನಮ್ಮ ಗೌರವಾನ್ವಿತ ಮುಖ್ಯಮಂತ್ರಿಯವರಿಗೆ ಅವಮಾನವಾಗಿದ್ದರೆ, ನನಗೆ ಕ್ಷಮೆ ಕೇಳುವುದಕ್ಕೆ ಯಾವುದೇ ತೊಂದರೆ ಇಲ್ಲ" ಎಂದು ಘೋಷ್ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ.
ಸಾಮಾನ್ಯವಾಗಿ ವಿವಾದಾತ್ಮಕ ಮಾತುಗಳನ್ನು ಹರಿದುಬಿಡುವುದಕ್ಕೆ ಹೆಸರುವಾಸಿಯಾದ ಘೋಷ್, ನೋಟು ಹಿಂಪಡೆತ ಕ್ರಮವನ್ನು ಉಗ್ರವಾಗಿ ಟೀಕಿಸುತ್ತಿರುವ ಮಮತಾ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಬ್ಯಾನರ್ಜಿ ವಿರುದ್ಧ 'ಅವಹೇಳನಕಾರಿ' ಮತ್ತು 'ತೀವ್ರ ಅಪಾಯಕಾರಿ' ವೈಯಕ್ತಿಕ ಹೇಳಿಕೆಗಳನ್ನು ನೀಡಿದ್ದಕ್ಕೆ ತೃಣಮೂಲ ಕಾಂಗ್ರೆಸ್ ಘೋಷ್ ಅವರನ್ನು ಖಂಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


