ಕೋಲ್ಕತ್ತಾ ಆರ್ ಬಿ ಐ ಎದುರು ತೃಣಮೂಲ ಕಾಂಗ್ರೆಸ್ ಪ್ರತಿಭಟನೆ
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ನೋಟುಗಳ ಪೂರೈಕೆಯಲ್ಲಿ ಅಭಾವವಾಗಿದೆ ಎಂದು ದೂರಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಕುಳಿತು ತೃಣಮೂಲ ಕಾಂಗ್ರೆಸ್ ಸಚಿವರು ಮತ್ತು ಶಾಸಕರು

Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ನೋಟುಗಳ ಪೂರೈಕೆಯಲ್ಲಿ ಅಭಾವವಾಗಿದೆ ಎಂದು ದೂರಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಕುಳಿತು ತೃಣಮೂಲ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಬುಧವಾರ ಪ್ರತಿಭಟನೆ ನಡೆಸಿದರು.
ಬ್ಯಾಂಕ್ ಅಧಿಕಾರಿಗಳ ಸಭೆಗೆ ಗುರುವಾರ ಆರ್ ಬಿ ಐ ಗವರ್ನರ್ ಉರ್ಜಿತ್ ಪಟೇಲ್ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಟಿ ಎಂ ಸಿ ಈ ಪ್ರತಿಭಟನೆ ನಡೆಸಿದೆ.
ಇಂಧನ ಸಚಿವ ಸೋವಂದೇಬ್ ಚಟ್ಟೋಪಾಧ್ಯಾಯ, ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್, ಕೋಲ್ಕತ್ತಾ ಮೇಯರ್ ಸೋವನ್ ಚಟರ್ಜಿ ಸೇರಿದಂತೆ ಹಿರಿಯ ಮುಖಂಡರು ಮತ್ತು ಸಚಿವರು ಬುಧವಾರ ಮಧ್ಯಾಹ್ನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
"ನೋಟು ಹಿಂಪಡೆತ ನಿರ್ಧಾರ ಪ್ರಕಟಿಸಿ ೩೫ ದಿನ ಕಳೆದಿದ್ದರು, ರಾಜ್ಯದ ಬ್ಯಾಂಕ್ ಗಳು ಮತ್ತು ಅಂಚೆ ಕಚೇರಿಗಳಲ್ಲಿ ಹೊಸ ನೋಟುಗಳ ಸರಬರಾಜಿನ ಅಭಾವದಿಂದ ನರಳುತ್ತಿವೆ. ಇದರಿಂದ ರಾಜ್ಯದ ಜನತೆ ಹಿಂದೆಂದೂ ಕಾಣದಂತೆ ತೊಂದರೆಗಳನ್ನು ಅನುಭವಿಸುತ್ತಿವೆ" ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಪ್ರತಿಭಟನೆಯ ವೇಳೆಯಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


