ಅಧಿಕಾರಿಗಳ ಮನೆ ಮೇಲೆ ಐಟಿ ದಾಳಿ: ಎಸ್ ಸಿ ಜಯಚಂದ್ರ ಸಿಬಿಐ ವಶಕ್ಕೆ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ನೂರಾರು ಕೋಟಿ ರುಪಾಯಿ ಆಸ್ತಿ ಪತ್ತೆಯಾಗಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ...

Published On :
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ನೂರಾರು ಕೋಟಿ ರುಪಾಯಿ ಆಸ್ತಿ ಪತ್ತೆಯಾಗಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರ ಅವರನ್ನು ಶುಕ್ರವಾರ ಸಿಬಿಐ ವಶಕ್ಕೆ ನೀಡಲಾಗಿದೆ.
ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜಯಚಂದ್ರ ಅವರನ್ನು ಸಿಬಿಐ ಅಧಿಕಾರಿಗಳು ಬಾಡಿ ವಾರಂಟ್ ಮೂಲಕ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮಗಳು ವರದಿಗಳು ಮಾಡಿವೆ.
ನಿನ್ನೆಯಷ್ಟೇ ಸಿಬಿಐ ವಿಶೇಷ ನ್ಯಾಯಾಲಯ ಜಯಚಂದ್ರ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. 5 ಲಕ್ಷ ರುಪಾಯಿ ಮೊತ್ತದ ಎರಡು ಬಾಂಡ್ ಮತ್ತು ಪಾಸ್‌ಪೋರ್ಟ್ ಅನ್ನು ನ್ಯಾಯಾಲಯದ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು. ಸ್ಥಳದಲ್ಲೇ ಪಾಸ್‌ಪೋರ್ಟ್ ಒಪ್ಪಿಸಲು ಜಯಚಂದ್ರ ಅವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಒಂದು ದಿನದ ಮಟ್ಟಿಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಜಯಚಂದ್ರ ಅವರನ್ನು ಸಿಬಿಐ ಪೊಲೀಸರು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ. ಕಪ್ಪುಹಣ ಬಿಳಿ ಮಾಡಿದ ಪ್ರಕರಣ ಮತ್ತು ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಜಯಚಂದ್ರ ವಿರುದ್ಧ ಸಿಬಿಐ ಮತ್ತು ಎಸಿಬಿ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿವೆ. ಜಯಚಂದ್ರ ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಕಾರಣ ಸಿಬಿಐ ಪೊಲೀಸರು ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ.
ಐಟಿ ದಾಳಿಯ ನಂತರ ರಾಜ್ಯ ಸರ್ಕಾರದ ಸೇವೆಯಿಂದ ಅಮಾನತುಗೊಂಡಿರುವ ಭ್ರಷ್ಟ ಅಧಿಕಾರಿಗಳಾದ ಟಿಎನ್ ಚಿಕ್ಕರಾಯಪ್ಪ ಹಾಗೂ ಎಸ್‌ಸಿ ಜಯಚಂದ್ರ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ಎಸಿಬಿ ತನಿಖೆ ನಡೆಸುತ್ತಿದ್ದು, ಜಾರಿ ನಿರ್ದೇಶನಾಲಯದ ವಿಚಾರಣೆ ನಂತರ ಈಗ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


