ಕೇವಲ 250 ರು.ಹೊಂದಿದ್ದ ಆಂಧ್ರ ಕಾರ್ಮಿಕನ ಖಾತೆಗೆ 1.26 ಕೋಟಿ ರು. ಜಮೆ!
ನೋಟ್ ನಿಷೇಧದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ರಾತ್ರೋರಾತ್ರಿ ಕೋಟ್ಯಾಧೀಶನಾದ ಅಚ್ಚರಿಯ ಘಟನೆ ಆಂಧ್ರಪ್ರದೇಶದಲ್ಲಿ...

Published On :
ವಿಜಯವಾಡ: ನೋಟ್ ನಿಷೇಧದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ರಾತ್ರೋರಾತ್ರಿ ಕೋಟ್ಯಾಧೀಶನಾದ ಅಚ್ಚರಿಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ!
ನಝಿರ್ ಎಂಬ ವ್ಯಕ್ತಿ ಕಳೆದ ಬುಧವಾರ ತನ್ನ ಖಾತೆಗೆ ಕೇವಲ 250 ರುಪಾಯಿ ಜಮೆ ಮಾಡಿದ್ದಾನೆ. ಇದಾದ ಬಳಿಕ ಆತನ ಖಾತೆಗೆ 1,26,76,436 ರುಪಾಯಿ ಜಮೆಯಾಗಿದೆ ಎಂದು ಮೊಬೈಲ್ ಗೆ ಮೆಸೇಜ್ ಬಂದಿದೆ.
ಅಚ್ಚರಿಗೊಂಡ ನಝಿರ್ ಎಟಿಎಂಗೆ ಹೋಗಿ ಮಿನಿ ಸ್ಟೇಟ್ ಮೆಂಟ್ ತೆಗೆದುಕೊಂಡಿದ್ದಾನೆ. ಅದರಲ್ಲೂ 1.26 ಕೋಟಿ ರುಪಾಯಿ ಬ್ಯಾಲೆನ್ಸ್ ತೋರಿಸಿದೆ. ಇದರಿಂದ ಮತ್ತಷ್ಟು ಆಘಾತಗೊಂಡ ನಝರಿ ಬ್ಯಾಂಕ್ ಅಧಿಕಾರಿಗಳನ್ನು ಭೇಟಿ ಮಾಡಿ ವಿಚಾರಿಸಿದ್ದಾನೆ.
ಈ ಹಣ ಹೇಗೆ ಜಮೆಯಾಯಿತು ಎಂಬುದು ನಮ್ಮ ಗಮನಕ್ಕೂ ಬಂದಿಲ್ಲ ಎಂದು ಹೇಳಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ನಝಿರ್ ಅವರು ಎರಡು ತಿಂಗಳ ಹಿಂದಷ್ಟೇ ಚಿತ್ತೂರು ಜಿಲ್ಲೆಯ ಅಮಿಲೆಪಲ್ಲಿ ಗ್ರಾಮದ ಆಂಧ್ರ ಬ್ಯಾಂಕ್ ನಲ್ಲಿ ಖಾತೆ ತೆಗೆದಿದ್ದರು. ಹಾಗ ಅವರ ಬ್ಯಾಂಕ್ ಬ್ಯಾಲೆನ್ಸ್ ಕೇವಲ 192 ರುಪಾಯಿ. ಈಗ 1.26 ಕೋಟಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


