ಪ್ರಧಾನ ಸುದ್ದಿ

ಮರ್ಯಾದಾ ಹತ್ಯೆ ಶಂಕೆ; ಬಿಹಾರದ ವೈಶಾಲಿ ಕೋಮು ಉದ್ವಿಘ್ನ

೨೦ ವರ್ಷದ ಬಾಲಕನನ್ನು ಮರ್ಯಾದಾ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇರೆಗೆ ಬಿಹಾರದ ವೈಶಾಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಗುರುವಾರ ಕೋಮು ಉದ್ವಿಘ್ನ ವಾತಾವರಣ ಉಂಟಾಗಿದೆ.

ಮರ್ಯಾದಾ ಹತ್ಯೆ ಶಂಕೆ; ಬಿಹಾರದ ವೈಶಾಲಿ ಕೋಮು ಉದ್ವಿಘ್ನ
ಸಾಂದರ್ಭಿಕ ಚಿತ್ರ
Published On :
ಪಾಟ್ನಾ: ೨೦ ವರ್ಷದ ಬಾಲಕನನ್ನು ಮರ್ಯಾದಾ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇರೆಗೆ ಬಿಹಾರದ ವೈಶಾಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಗುರುವಾರ ಕೋಮು ಉದ್ವಿಘ್ನ ವಾತಾವರಣ ಉಂಟಾಗಿದೆ. 
ಸರ್ಮ ಗ್ರಾಮದಲ್ಲಿ ವೀರಚಂದ್ ಎಂಬ ಬಾಲಕನ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಮತ್ತೊಂದು ಕೋಮಿನ ಬಾಲಕಿಯ ಜೊತೆಗಿನ ಪ್ರೇಮದ ಸಲುವಾಗಿ ಇವನನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ ಎಂದಿದ್ದಾರೆ. 
ಅವನ ಶವ ಬಾಲಕಿಯ ಗೃಹದ ಹಿಂಭಾಗದಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಬಾಲಕಿ ಮತ್ತು ಅವರ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
"ನಾವು ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ ಹಾಗು ಶಾಂತಿ ಕಾಪಾಡಲು ಹತ್ತಿರದ ಪೊಲೀಸ್ ಠಾಣೆಯಿಂದ ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ" ಎಂದು ಪೊಲೀಸ್ ಸೂಪರಿಂಟೆಂಡೆಂಟ್ ರಾಕೇಶ್ ಕುಮಾರ್ ಹೇಳಿದ್ದಾರೆ. 
ಮಾಧ್ಯಮಗಳ ವರದಿಗಳ ಪ್ರಕಾರ ಜನರ ಗುಂಪು ಭೀತಿ ಸೃಷ್ಟಿಸಲು ಈ ಸಮಯದಲ್ಲಿ ಪೊಲೀಸರು ಮತ್ತು ಬಾಲಕಿಯ ಮನೆಯ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ ಎನ್ನಲಾಗಿದೆ. 
ಈ ಉದ್ವಿಘ್ನತೆಯ ಹಿನ್ನಲೆಯಲ್ಲಿ ಜಿಲ್ಲಾ ಮೆಜೆಸ್ಟ್ರೇಟ್ ರಚನಾ ಪಾಟೀಲ್ ಮತ್ತು ಎಸ್ ಪಿ ರಾಕೇಶ್ ಕುಮಾರ್ ಗ್ರಾಮದಲ್ಲೇ ವಾಸ್ತವ್ಯ ಹೂಡಿದ್ದಾರೆ. 
ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದ ಸುತ್ತಮುತ್ತ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ. "ಗ್ರಾಮದ ಎರಡು ಸಮುದಾಯಗಳ ನಡುವೆ ಉದ್ವಿಘ್ನತೆ ಇದೆ ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಗ್ರಾಮಸ್ಥರು ಹೇಳುವ ಪ್ರಕಾರ ಕೊಲೆಯಾಗಿರುವ ಬಾಲಕ ಕೊನೆಯ ಬಾರಿ ಗ್ರಾಮದಲ್ಲಿ ಬುಧವಾರ ಸಂಜೆ ಕಾಣಿಸಿಕೊಂಡಿದ್ದ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.