ಪ್ರಧಾನ ಸುದ್ದಿ

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಕಾವೇರಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಶ್ವಾಸಕೋಶ ಸೋಂಕಿನಿಂದಾಗಿ ಮತ್ತೆ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಶುಕ್ರವಾರ...

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಕಾವೇರಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕರುಣಾನಿಧಿ
Published On :
ಚೆನ್ನೈ: ಶ್ವಾಸಕೋಶ ಸೋಂಕಿನಿಂದಾಗಿ ಮತ್ತೆ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸುಮಾರು ಒಂದು ವಾರಗಳ ಚಿಕಿತ್ಸೆಯ ನಂತರ ಕರುಣಾನಿಧಿ ಅವರು ಇಂದು ಸಂಜೆ ಆಸ್ಪತ್ರೆಯಿಂದ ಮನಗೆ ವಾಪಸ್ ಆಗಿದ್ದಾರೆ.
ಶ್ವಾಸಕೋಶ  ಸೋಂಕು, ಅಜೀರ್ಣ ಹಾಗೂ ಶೀತದಿಂದ ಬಳಲುತ್ತಿದ್ದ ಕರುಣಾನಿಧಿಯವರು ಡಿಸೆಂಬರ್ 15ರಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು. 
ಕರುಣಾನಿಧಿ ಅವರು ಆಸ್ಪತ್ರೆಗೆ ಮರುದಾಖಲಾಗಿರುವ ಕುರಿತಂತೆ ಆಸ್ಪತ್ರೆಯ ವೈದ್ಯರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕರುಣಾ ನಿಧಿಯವರಿಗೆ ಶ್ವಾಸಕೋಶ ಸೋಂಕು ಎದುರಾಗಿದ್ದು, ಪರಿಣಾಮ ಉಸಿರಾಟಕ್ಕೆ ಸಮಸ್ಯೆಯುಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ಮರುದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದರು.
ಕೆಲದಿನಗಳ ಹಿಂದಷ್ಟೇ ನಿರ್ಜಲೀಕರಣದಿಂದ ಬಳಲುತ್ತಿದ್ದ ಕರುಣಾನಿಧಿಯವರು ಡಿಸೆಂಬರ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಸುಧಾರಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.