ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಯಾವುದೇ ಅರ್ಜಿ ಬಂದಿಲ್ಲ: ವಕ್ತಾರ ಪೊನ್ನೈಯನ್
ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇದುವರೆಗೂ ಯಾವುದೇ ಅರ್ಜಿ ಬಂದಿಲ್ಲ ಎಂದು ಎಐಎಡಿಎಂಕೆ ವಕ್ತಾರ ಸಿ.ಪೊನ್ನೈಯನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

Published On :
ಚೆನ್ನೈ: ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇದುವರೆಗೂ ಯಾವುದೇ ಅರ್ಜಿ ಬಂದಿಲ್ಲ ಎಂದು ಎಐಎಡಿಎಂಕೆ ವಕ್ತಾರ ಸಿ.ಪೊನ್ನೈಯನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿ ಹುದ್ದೆಗಾಗಿ ಇದುವರೆಗೂ ಯಾವುದೇ ಅರ್ಜಿ ಬಂದಿಲ್ಲ ಎಂದು ಪೊನ್ನೈಯನ್ ಅವರು ಇಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದೇ ವೇಳೆ ಶಶಿಕಲಾ ನಟರಾಜ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಲಿದ್ದಾರೆಯೇ? ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೊನ್ನೈಯನ್ ಅವರು, ನಾಳೆ ನೂತನ ಪ್ರಧಾನ ಕಾರ್ಯದರ್ಶಿ ಆಯ್ಕೆಗಾಗಿ ಮಾತ್ರ ಸಭೆ ಕರೆಯಲಾಗಿದೆ ಎಂದರು.
ಇಂದು ಪಕ್ಷದ ಉಚ್ಚಾಟಿತ ನಾಯಕಿ ಶಶಿಕಲಾ ಪುಷ್ಪ ಅವರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಬಂದ ವೇಳೆ ಎಐಎಡಿಎಂಕೆ ಕಚೇರಿಯ ಹೊರಗೆ ಎರಡು ಬಣಗಳ ನಡುವೆ ಮಾರಾಮಾರಿ ನಡೆದ ನಂತರ ಪೊನ್ನೈಯನ್ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ನಾಳೆ ಎಐಎಡಿಎಂಕೆ ಪಕ್ಷದ ಕೌನ್ಸಿಲ್ ಸಭೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಉಚ್ಛಾಟಿತ ರಾಜ್ಯಸಭಾ ಸಂಸದೆ ಶಶಿಕಲಾ ಅವರು ಬೆಂಬಲಿಗರು, ಪತಿ ಹಾಗೂ ನಾಲ್ವರು ವಕೀಲರೊಂದಿಗೆ ಬಂದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪಕ್ಷದ ಕೆಲ ಕಾರ್ಯಕರ್ತರೊಂದಿಗೆ ವಾಗ್ವಾದಗಳು ಆರಂಭವಾಗಿದೆ. ನಂತರ ಈ ಮಾತಿನ ಚಕಮಕಿಗಳು ಮಾರಾಮಾರಿಗೆ ಹೋಗಿದೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


