ಮುರುಘಾ ಮಠ ಶ್ರೀಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಮಠದ ಆಸ್ತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಲ್ಲಿ ಗೈರು ಹಾಜರಾದ ಪರಿಣಾಮ ಮುರುಘಾಮಠದ ಶ್ರೀ ಡಾ.ಶಿವಮೂರ್ತಿ ಸ್ವಾಮೀಜಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ...

ಬೆಂಗಳೂರು: ಮಠದ ಆಸ್ತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಲ್ಲಿ ಗೈರು ಹಾಜರಾದ ಪರಿಣಾಮ ಮುರುಘಾಮಠದ ಶ್ರೀ ಡಾ.ಶಿವಮೂರ್ತಿ ಸ್ವಾಮೀಜಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಮುರುಘಾ ಮಠಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಸಂಬಂಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಶ್ರೀಗಳು ಗೈರು ಹಾಜರಾಗಿದ್ದರಿಂದ ಅವರ ವಿರುದ್ಧ ಬೆಂಗಳೂರಿನ 4ನೇ ಎಸಿಎಂಎಂ ಕೋರ್ಟ್ ಮಂಗಳವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಈ ಹಿಂದೆ ಮುರುಘಾ ಮಠಕ್ಕೆ ಸೇರಿದೆ ಎನ್ನಲಾದ ಕೆಂಗೇರಿಯ ಸೂಲಿಕೆರೆಯಲ್ಲಿನ 7ಎಕರೆ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆಂದು ಆರೋಪಿಸಿ ಪಿಎಸ್ ಪ್ರಕಾಶ್ ಎಂಬವರು ದೂರು ದಾಖಲಿಸಿದ್ದರು. ಈ ಬಗ್ಗೆ ಪೊಲೀಸರು ಆರೋಪಪಟ್ಟಿ ಕೂಡಾ ಸಲ್ಲಿಸಿದ್ದರು. ಆದರೆ ಮಂಗಳವಾರ ನಡೆದ ವಿಚಾರಣೆಗೆ ಡಾ.ಶಿವಮೂರ್ತಿ ಮುರುಘಾ ಶರಣರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


