ಪ್ರಧಾನ ಸುದ್ದಿ

'ಇನ್ವೆಸ್ಟ್ ಕರ್ನಾಟಕ - 2016'ಕ್ಕೆ ಅರುಣ್ ಜೇಟ್ಲಿ ಚಾಲನೆ

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2016'ಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ಬುಧವಾರ ಚಾಲನೆ ನೀಡಿದರು....

'ಇನ್ವೆಸ್ಟ್ ಕರ್ನಾಟಕ - 2016'ಕ್ಕೆ ಅರುಣ್ ಜೇಟ್ಲಿ ಚಾಲನೆ
ಅರಮನೆ ಮೈದಾನದಲ್ಲಿ ಸಿದ್ಧಗೊಂಡಿರುವ ಇನ್ವೆಸ್ಟ್ ಕರ್ನಾಟಕ ಸಮಾವೇಶ ವೇದಿಕೆ
Published On :
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2016'ಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ಬುಧವಾರ ಚಾಲನೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಅರುಣ್ ಜೇಟ್ಲಿ ಅವರು ಇಂದು ರೋಬೋಟ್ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್, ಕೈಗಾರಿಕಾ ಸಚಿವ ಆರ್. ವಿ.ದೇಶಪಾಂಡೆ ಹಾಗೂ ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇನ್ಫೋಸಿಸ್ ನಾರಾಯಣಮೂರ್ತಿ, ಕುಮಾರಮಂಗಲಂ ಬಿಲ್ರಾ, ಅಜೀಂಪ್ರೇಮ್ ಜಿ, ಅನಿಲ್ ಅಂಬಾನಿ, ಕಿರಣ್ ಮಜುಂದಾರ್ ಶಾ, ಸಜ್ಜನ್ ಜಿಂದಾಲ್ ಸೇರಿದಂತೆ ಹಲವು ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.ಭದ್ರತೆಗಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 
ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯಪುರ ಮತ್ತಿತರ ಜಿಲ್ಲೆಗಳಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಈ ಬಾರಿ ಪ್ರೋತ್ಸಾಹ ನೀಡಲಾಗುತ್ತಿದೆ. 
ಜಪಾನ್, ಜರ್ಮನಿ, ದಕ್ಷಿಣ ಕೊರಿಯಾ, ಇಟಲಿ, ಬ್ರಿಟನ್, ಫ್ರಾನ್ಸ್ ಪಾಲುದಾರ ರಾಷ್ಟ್ರಗಳಾಗಿವೆ. ಇನ್ನು ಹೂಡಿಕೆದಾರರ ಸಮಾವೇಶದಿಂದ ರು.2.50ಲಕ್ಷಕ್ಕೂ ಹೆಚ್ಚು ಕೋಟಿಗಳಷ್ಟು ಬಂಡವಾಳ ಹೂಡಿಕೆಯಾಗಿಲಿದೆ ಎಂದು ರಾಜ್ಯ ಸರ್ಕಾರ ನಿರೀಕ್ಷಿಸಿದೆ. ಅಲ್ಲದೇ, ಸಮಾವೇಶದ ಸಂದರ್ಭದಲ್ಲಿ ಹಲವಾರು ಬೃಹತ್ ಯೋಜನೆಗಳು ಪ್ರಕಟಗೊಳ್ಳುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.