ರಾಜ್ಯಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು: ಅರುಣ್ ಜೇಟ್ಲಿ
ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಯತ್ನಕ್ಕೆ ಕೇಂದ್ರ ಸರ್ಕಾರದ ಸಹಕಾರ ಇದ್ದೇ ಇರುತ್ತೆ. ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಮಾಡುವ ಎಲ್ಲಾ...

Published On :
ಬೆಂಗಳೂರು: ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಯತ್ನಕ್ಕೆ ಕೇಂದ್ರ ಸರ್ಕಾರದ ಸಹಕಾರ ಇದ್ದೇ ಇರುತ್ತೆ. ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಮಾಡುವ ಎಲ್ಲಾ ಯತ್ನಕ್ಕೂ ಕೇಂದ್ರ ಸಾಥ್ ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದ ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನ ನಿರ್ಮೂಲನೆ ಹಾಗೂ ಆರ್ಥಿಕ ಅಭಿವೃದ್ಧಿ ನಮ್ಮ ಉದ್ದೇಶವಾಗಿದ್ದು, ದೇಶದಲ್ಲಿ ಈಗ ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆ ಇದೆ. ಎಲ್ಲಾ ರಾಜ್ಯಗಳು ಬಂಡವಾಳ ಆಕರ್ಷಣೆಗೆ ಸ್ಪರ್ಧೆಗಳಿದಿವೆ. ಪರಸ್ಪರ ಸ್ಪರ್ಧೆಗಿಳಿಯುವ ಆರೋಗ್ಯಕರ ವಾತಾವರಣ ಇದೆ. ಆದರೆ ಉದ್ಯಮಿಗಳನ್ನು ಆಕರ್ಷಿಸುವುದು ಅಷ್ಟು ಸುಲಭದ ಮಾತಲ್ಲ ಎಂದರು.
ರಾಜ್ಯಗಳಲ್ಲಿ ಸ್ಥಿರ ಸರ್ಕಾರ, ನಿಯಮಗಳು ಹಾಗೂ ಉದ್ಯಮ ಸ್ನೇಹಿ ವಾತಾವರಣ ಸೇರಿದಂತೆ ಇನ್ನೂ ಹಲವು ಅನುಕೂಲಗಳಿದ್ದರೆ ಮಾತ್ರ ಉದ್ಯಮಿಗಳು ಬಂಡವಾಳ ಹೂಡುತ್ತಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಪ್ರಸ್ತುತ ವಿಶ್ವದಲ್ಲಿ ಆರ್ಥಿಕ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಇದರಿಂದಾಗಿ ತೈಲ ಉತ್ಪನ್ನಗಳು ಹಾಗೂ ಲೋಹ ಉತ್ಪನ್ನಗಳ ಬೆಲೆ ಇಳಿಯುತ್ತಿದೆ. ಇಂತಹ ಅವಕಾಶವನ್ನು ಭಾರತ ಬಳಕೆ ಮಾಡಿಕೊಳ್ಳಬೇಕು. ಇದಕ್ಕಾಗಿ ನಮ್ಮ ಆಂತರಿಕ ಆರ್ಥಿಕ ವ್ಯವಸ್ಥೆ ಬಲಗೊಳ್ಳಬೇಕಿದೆ. ಇಂದು ಇಡೀ ವಿಶ್ವ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಜೇಟ್ಲಿ ಹೇಳಿದರು.
ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಉದ್ಯಮಿ ರತನ್ ಟಾಟಾ ಇನ್ಫೋಸಿಸ್ ನಾರಾಯಣಮೂರ್ತಿ, ಕುಮಾರಮಂಗಲಂ ಬಿಲ್ರಾ, ಅಜೀಂಪ್ರೇಮ್ ಜಿ, ಅನಿಲ್ ಅಂಬಾನಿ, ಕಿರಣ್ ಮಜುಂದಾರ್ ಶಾ, ಸಜ್ಜನ್ ಜಿಂದಾಲ್ ಸೇರಿದಂತೆ ಹಲವು ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


