ಪ್ರಧಾನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಯೂರಿಯ ಉತ್ಪಾದನಾ ಘಟಕ ಸ್ಥಾಪನೆ: ಅನಂತ್ ಕುಮಾರ್

ಉತ್ತರ ಕರ್ನಾಟಕ ಭಾಗದಲ್ಲಿ ಯೂರಿಯಾ ಉತ್ಪಾದನಾ ಕಾರ್ಖಾನೆ ಸ್ಥಾಪಿಸುವುದಾಗಿ ಕೇಂದ್ರ ರಸಗೊಬ್ಬರ ಹಾಗೂ...

ಉತ್ತರ ಕರ್ನಾಟಕದಲ್ಲಿ ಯೂರಿಯ ಉತ್ಪಾದನಾ ಘಟಕ ಸ್ಥಾಪನೆ: ಅನಂತ್ ಕುಮಾರ್
ಅನಂತ್ ಕುಮಾರ್
Published On :
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಯೂರಿಯಾ ಉತ್ಪಾದನಾ ಕಾರ್ಖಾನೆ ಸ್ಥಾಪಿಸುವುದಾಗಿ ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಸಚಿವ ಅನಂತ್ ಕುಮಾರ್ ಬುಧವಾರ ಹೇಳಿದ್ದಾರೆ.
ಇಂದು ಅರಮಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿದ ಅನಂತ್ ಕುಮಾರ್, ಉತ್ತರ ಕರ್ನಾಟಕದಲ್ಲಿ 1.3 ಮಿಲಿಯನ್ ಉತ್ಪಾದನಾ ಸಾಮರ್ಥ್ಯದ ಯೂರಿಯಾ ರಸಗೊಬ್ಬರ ಕಾರ್ಖಾನೆಯನ್ನು ಆರಂಭಿಸುವುದಾಗಿ ತಿಳಿಸಿದರು.
ಭಾರತ ಪ್ರಸ್ತುತ ಯೂರಿಯಾವನ್ನು ಆಮದು ಮಾಡಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಯೂರಿಯಾವನ್ನು ರಫ್ತು ಮಾಡುವ ದೇಶವಾಗಿ ಬದಲಾಗಲಿದೆ ಎಂದು ಅವರು ಹೇಳಿದರು.
ಔಷಧ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಎನ್ಐಎಫ್ಎ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಆರಂಭಿಸಲಾಗುವುದು. ಔಷಧ ವಲಯದಲ್ಲಿ ಅತ್ಯಂತ ಮಹತ್ವ ಪಡೆ‌ದಿರುವ ಈ ಸಂಸ್ಥೆಯನ್ನು ಆರಂಭಿಸಲು ಹಲವು ರಾಜ್ಯಗಳು ಸರದಿಯಲ್ಲಿ ನಿಂತಿವೆ. ಕಳೆದ ವರ್ಷವೇ ಈ ಸಂಸ್ಥೆಯ ಆರಂಭಕ್ಕೆ ಪ್ರಯತ್ನ ಪಟ್ಟಿದ್ದೆ. ಈ ವರ್ಷ ಕೇಂದ್ರ ಹಣಕಾಸು ಸಚಿವ ಜೇಟ್ಲಿಯವರಲ್ಲಿ ಮನವಿ ಮಾಡಿದ್ದೇನೆ. ಬೆಂಗಳೂರಿನಲ್ಲಿ ಈ ಸಂಸ್ಥೆಯನ್ನು ಆರಂಭಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು.
ಇದೇ ವೇಳೆ ಕರ್ನಾಟಕ ಬಂಡವಾಳ ಹೂಡಿಕೆಗೆ ಅತ್ಯಂತ ಪ್ರಶಸ್ತವಾದ ರಾಜ್ಯ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವನ್ನು ದೂರಇಟ್ಟು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪರಸ್ಪರ ಸಹಕಾರದ ಮೇಲೆ ಕಾರ್ಯನಿರ್ವಹಿಸುತ್ತಿವೆ ಎಂದು ಅನಂತ್ ಕುಮಾರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.