ಫೆ. 23 ರಿಂದ ಸಂಸತ್ ಬಜೆಟ್ ಅಧಿವೇಶನ, 29ರಂದು ಸಾಮಾನ್ಯ ಆಯವ್ಯಯ ಮಂಡನೆ
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಫೆ. 23ರಿಂದ ಆರಂಭವಾಗಲಿದೆ. 25ರಂದು ರೈಲ್ವೆ ಬಜೆಟ್, 29ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿವೆ.

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಫೆ. 23ರಿಂದ ಆರಂಭವಾಗಲಿದೆ. 25ರಂದು ರೈಲ್ವೆ ಬಜೆಟ್, 29ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿವೆ.
ಗೃಹ ಸಚಿವ ರಾಜನಾಥ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಫೆ. 23ರಂದು ಆರಂಭವಾಗುವ ಬಜೆಟ್ ಅಧಿವೇಶನದ ಮೊದಲ ಭಾಗ ಮಾರ್ಚ್ 16ರವರೆಗೆ ಮುಂದುವರೆಯಲಿದೆ. 23ರಂದು ರೈಲ್ವೆ, 29ರಂದು ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ. ಈ ಮಧ್ಯೆ 26ರಂದು ಬಜೆಟ್ ಪೂರ್ವ ಸಮೀಕ್ಷೆ ನಡೆಯಲಿದೆ. ಅಧಿವೇಶನದ ಎರಡನೇ ಭಾಗ ಏ. 25ರಿಂದ ಮೇ 13ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
23ರಂದು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಭಾಷಣ ಮಾಡಲಿದ್ದಾರೆ. ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಸಲಹೆಗಳು ಬಂದಿವೆ. ಆದರೆ, ಸರ್ಕಾರ ಅಧಿವೇಶನ ಮೊಟಕುಗೊಳಿಸದೇ ಪೂರ್ಣಗೊಳಿಸಲಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


