ಪ್ರಧಾನ ಸುದ್ದಿ

ತಾಂಜೇನಿಯಾ ಯುವತಿ ಮೇಲೆ ಹಲ್ಲೆ ಪ್ರಕರಣ: ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ; ಡಿವಿಎಸ್

ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ...

ತಾಂಜೇನಿಯಾ ಯುವತಿ ಮೇಲೆ ಹಲ್ಲೆ ಪ್ರಕರಣ: ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ; ಡಿವಿಎಸ್
ಸದಾನಂದಗೌಡ,
Published On :
ಬೆಂಗಳೂರು: ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಗ್ಧರನ್ನು ಬಂಧಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರು ಶುಕ್ರವಾರ ಆರೋಪಿಸಿದ್ದಾರೆ.
ಇಂದು ಗಣಪತಿಪುರದಲ್ಲಿರುವ ಅಪಘಾತದಲ್ಲಿ ಮೃತಪಟ್ಟ ಮಹಿಳೆ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿವಿಎಸ್, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸಬಾರದು. ರಾಜ್ಯ ಸರ್ಕಾರ ವಿನಾಕಾರಣ ಮುಗ್ಧರನ್ನು ಬಂಧಿಸಿದೆ ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿರುವ ವಿದೇಶಿ ವಿದ್ಯಾರ್ಥಿಗಳಿಗೆ ರಾಜ್ಯದ ಕಾನೂನು ಪಾಲಿಸುವಂತೆ ಸರ್ಕಾರ ಸೂಚಿಸಬೇಕು. ರಾಹುಲ್ ಗಾಂಧಿ ಬಂದಾಗ ಅವರಿಂದ ಸುತ್ತುವ ಪೊಲೀಸರು ಸ್ಥಳೀಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುತ್ತಿದೆ ಎಂದು ಸದಾನಂದಗೌಡ ದೂರಿದರು.
ಈ ವೇಳೆ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಗಣಪತಿಪುರ ನಿವಾಸಿಗಳು ಡಿವಿಎಸ್ ಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಈ ವೇಳೆ ಬಂಧಿತ ಲೋಕೇಶ್ ಅವರ ಪತ್ನಿ ಅಸ್ವಸ್ಥರಾಗಿ ಕುಸಿದುಬಿದ್ದರು. ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ಕಳೆದ ಭಾನುವಾರ ಮದ್ಯ ಸೇವಿಸಿದ್ದ ಸೂಡಾನ್‌ ವಿದ್ಯಾರ್ಥಿ ಮೊಹಮದ್‌ ಅಹದ್‌ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಸನಾವುಲ್ಲಾ ಅವರ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಅವರ ಪತ್ನಿ ಶಬಾನಾ ತಾಜ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಜನ ಕಾರಿನಲ್ಲಿದ್ದ ತಾಂಜೇನಿಯಾದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಐವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.