ವಿಬ್'ಗಯಾರ್ ಶಾಲೆಗೆ ನುಗ್ಗಿದ ಚಿರತೆ: ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿಯಿಂದ ಕಾರ್ಯಾಚರಣೆ
ನಗರದ ವರ್ತೂರಿನಲ್ಲಿರುವ ವಿಬ್'ಗಯಾರ್ ಶಾಲೆಗೆ ಚಿರತೆ ನುಗ್ಗಿದ್ದು, ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ...

ಬೆಂಗಳೂರು: ನಗರದ ವರ್ತೂರಿನಲ್ಲಿರುವ ವಿಬ್'ಗಯಾರ್ ಶಾಲೆಗೆ ಚಿರತೆ ನುಗ್ಗಿದ್ದು, ಚಿರತೆ ಹಿಡಿಯಲು 50 ಮಂದಿ ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇಂದು ಬೆಳಿಗ್ಗೆ ಅರಣ್ಯ ಇಲಾಖಾ ಪೊಲೀಸರಿಗೆ ಕರೆ ಮಾಡಿರುವ ಶಾಲೆಯ ಭದ್ರತಾ ಸಿಬ್ಬಂದಿಗಳು ಶಾಲೆಗೆ ಚಿರತೆ ನುಗ್ಗಿರುವುದಾಗಿ ಹೇಳಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಿಬ್ಬಂದಿ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈಗಾಗಲೇ ಶಾಲೆಗೆ ಆಗಮಿಸಿರುವ ಅರಣ್ಯ ಇಲಾಖೆ ಪೊಲೀಸರು ಶಾಲೆಯ ಸುತ್ತಮುತ್ತಲೂ ತಪಾಸಣೆ ನಡೆಸುತ್ತಿದ್ದಾರೆ. ಚಿರತೆ ಬಗೆಗಿನ ಮಾಹಿತಿ ಹರಡುತ್ತಿದ್ದಂತೆ ಈಗಾಗಲೇ ಶಾಲೆಯ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಜನರನ್ನು ಕಳುಹಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಚಿರತೆ ನುಗ್ಗಿರುವುದು ಖಚಿತ
ಚಿರತೆ ನುಗ್ಗಿರುವುದಾಗಿ ಸಿಬ್ಬಂದಿ ನೀಡಿದ ಹೇಳಿಕೆ ಸತ್ಯ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದ್ದರು.
ಚಿರತೆ ನುಗ್ಗಿರುವುದಾಗಿ ಸಿಬ್ಬಂದಿ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದರು. ಇದರಂತೆ ಸ್ಥಳಕ್ಕಾಗಮಿಸಿದ ನಾವು ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಚಿರತೆ ಶಾಲೆಯ ಮುಖ್ಯದ್ವಾರದ ಮೂಲಕವೇ ಶಾಲೆ ಒಳ ಪ್ರವೇಶಿಸಿದೆ. ಇದೀಗ ಚಿರತೆ ಹಿಡಿಯಲು ಬೋನ್ ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


