ಪ್ರಧಾನ ಸುದ್ದಿ

ಹುಬ್ಬಳ್ಳಿ ರೇಲ್ವೆ ನಿಲ್ದಾಣದ ಪಾರ್ಸಲ್ ಕಚೇರಿ ಕುಸಿತ: ರಕ್ಷಿಸಲ್ಪಟ್ಟ ಆರು ಜನರಲ್ಲಿ ನಾಲ್ವರು ಸಾವು

ಹುಬ್ಬಳ್ಳಿಯ ಕೇಂದ್ರ ರೇಲ್ವೆ ನಿಲ್ದಾಣದ ಬಳಿ ಇರುವ ಪಾರ್ಸಲ್ ಕಚೇರಿಯ ಕಟ್ಟಡ ಸೋಮವಾರ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಆರು ಸಿಬ್ಬಂದಿಯನ್ನು...

ಹುಬ್ಬಳ್ಳಿ ರೇಲ್ವೆ ನಿಲ್ದಾಣದ ಪಾರ್ಸಲ್ ಕಚೇರಿ ಕುಸಿತ: ರಕ್ಷಿಸಲ್ಪಟ್ಟ ಆರು ಜನರಲ್ಲಿ ನಾಲ್ವರು ಸಾವು
ಕುಸಿದುಬಿದ್ದ ಪಾರ್ಸಲ್ ಕಚೇರಿಯ ಕಟ್ಟಡ
Published On :
ಹುಬ್ಬಳ್ಳಿ: ಹುಬ್ಬಳ್ಳಿಯ ಕೇಂದ್ರ ರೇಲ್ವೆ ನಿಲ್ದಾಣದ ಬಳಿ ಇರುವ ಪಾರ್ಸಲ್ ಕಚೇರಿಯ ಕಟ್ಟಡ ಸೋಮವಾರ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಆರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಆದರೆ ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸುಮಾರು 50 ವರ್ಷ ಹಳೆಯದಾದ ಎರಡು ಅಂತಸ್ತಿನ ಕಟ್ಟಡ ಇಂದು ದೀಢಿರ್ ಕುಸಿದು ಬಿದ್ದಿದೆ. ಸ್ಥಳಕ್ಕೆ ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರೇಲ್ವೆ ಸಿಬ್ಬಂದಿ ಧಾವಿಸಿದ್ದು, ಕಟ್ಟದೊಳಗೆ ಸಿಲುಕಿರುವ ಸಿಬ್ಬಂದಿಯ ರಕ್ಷಣೆ ಮಾಡಿ ರೇಲ್ವೆ ಆಸ್ಪತ್ರೆಗೆ ದಾಖಲಿಸಿದ್ದರು.
ರಕ್ಷಣಾ ಸಿಬ್ಬಂದಿ ಬಸಯ್ಯ ಹಿರೇಮಠ ಹಾಗೂ ರೆಹಮಾನ್ ಎಂಬುವವರು ಸೇರಿದಂತೆ ಇದುವರೆಗೆ ಐವರು ಸಿಬ್ಬಂದಿಯನ್ನು ರಕ್ಷಿಸಿದ್ದಾರೆ. 
ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗರಾಣೆ ಅವರು ಭೇಟಿ ನೀಡಿದ್ದರು.
ಹಳೆಯ ಕಟ್ಟಡ ನೆಲಸಮಗೊಳಿಸುವಾಗ ಕಟ್ಟಡ ಕುಸಿತ
ಹಳೆಯ ಕಟ್ಟಡವನ್ನು ನೆಲಸಮಗೊಳಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ರೈಲ್ವೆ ರಕ್ಷಣಾ ತಂಡದ ಇನ್ಸ್ ಪಕ್ಟರ್ ಕುಬೇರಪ್ಪ ತಿಳಿಸಿದ್ದಾರೆ. ಕಟ್ಟಡದ 2ನೇ ಅಂತಸ್ತಿನಲ್ಲಿ ಪೊಲೀಸ್ ಠಾಣೆ ಇದ್ದಿದ್ದು, ಅದನ್ನು ಬೇರೆಡೆ ಸ್ಥಳಾಂತರಿಸಲಾಗಿತ್ತು. ಕಟ್ಟಡದ ಮೊದಲ ಅಂತಸ್ತಿನಲ್ಲಿ ಗೋಡೆ ಒಡೆಯುತ್ತಿದ್ದಾಗ ಮೇಲಂತಸ್ತು ಕುಸಿದು ಬಿದ್ದಿದೆ ಎಂದು ಕುಬೇರಪ್ಪ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.