ಸಿಯಾಚಿನ್ ಮೂಲ ಶಿಬಿರಕ್ಕೆ ಇತರೆ 9 ಹುತಾತ್ಮ ಯೋಧರ ಪಾರ್ಥಿವ ಶರೀರ
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ್ದ ಭೀಕರ ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ 10 ಯೋಧರ ಪೈಕಿ ಉಳಿದ 9 ಯೋಧರ ಪಾರ್ಥಿವ ಶರೀರಗಳನ್ನು...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ್ದ ಭೀಕರ ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ 10 ಯೋಧರ ಪೈಕಿ ಉಳಿದ 9 ಯೋಧರ ಪಾರ್ಥಿವ ಶರೀರಗಳನ್ನು ಶನಿವಾರ ಹಿಮಗಡ್ಡೆಗಳ ಅಡಿಯಿಂದ ಎತ್ತಿ ವಿಮಾನದ ಮೂಲಕ ಲಡಾಖ್ ವಿಭಾಗದ ಸಿಯಾಚಿನ್ ಮೂಲ ಶಿಬಿರಕ್ಕೆ ತರಲಾಗಿದೆ.
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಮೃತ ಯೋಧರ ಪಾರ್ಥಿವ ಶರೀರಗಳನ್ನು ಹೊರತೆಗೆಯಲು ಇದುವರೆಗೂ ಸಾಧ್ಯವಾಗಿರಲಿಲ್ಲ. ಇಂದು ಹವಾಮಾನ ಪರಿಸ್ಥಿತಿ ಸುಧಾರಿಸಿದ ಕಾರಣ ಮೃತ ಯೋಧರ ಪಾರ್ಥಿವ ಶರೀರವನ್ನು ಹೊರ ತೆಗೆದು ಲೇಹ್ಗೆ ಕಳುಹಿಸಿಕೊಡಲಾಗಿದೆ.
ಎಲ್ಲಾ ಯೋಧರ ಪಾರ್ಥಿವ ಶರೀರಗಳೂ ಈದಿನ ಸಿಯಾಚಿನ್ ಮೂಲ ಶಿಬಿರಕ್ಕೆ ತಲುಪಿವೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
6 ದಿನಗಳ ನಂತರ ಹಿಮಗಡ್ಡೆಗಳ ಅಡಿ ಜೀವಂತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ ಬಳಿಕ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು. ನಿನ್ನೆಯಷ್ಟೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರಿನಲ್ಲಿ ಹನುಮಂತಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


