ಪ್ರಧಾನ ಸುದ್ದಿ

ಹುತಾತ್ಮ ಯೋಧ ನಾಗೇಶ್ ಕುಟುಂಬ ಭೇಟಿ ಮಾಡಿದ ಹೆಚ್'ಡಿಕೆ

ಸಿಯಾಚಿನ್ ಭೀಕರ ಹಿಮಪಾತದಲ್ಲಿ ಹುತಾತ್ಮನಾದ ತೇಜೂರು ಗ್ರಾಮದ ಯೋಧ ನಾಗೇಶ್ ಮನೆಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆಂದು ತಿಳಿದುಬಂದಿದೆ...

ಹುತಾತ್ಮ ಯೋಧ ನಾಗೇಶ್ ಕುಟುಂಬ ಭೇಟಿ ಮಾಡಿದ ಹೆಚ್'ಡಿಕೆ
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ
Published On :
ಹಾಸನ: ಸಿಯಾಚಿನ್ ಭೀಕರ ಹಿಮಪಾತದಲ್ಲಿ ಹುತಾತ್ಮನಾದ ತೇಜೂರು ಗ್ರಾಮದ ಯೋಧ ನಾಗೇಶ್ ಮನೆಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆಂದು ತಿಳಿದುಬಂದಿದೆ. 
ಈಗಾಗಲೇ ಹುತಾತ್ಮ ಯೋಧ ನಾಗೇಸ್ ಕುಟುಂಬಸ್ಥರನ್ನು ಭೇಟಿ ಮಾಡಿರುವ ಅವರು, ಸಿಯಾಚಿನ್ ನಲ್ಲಿ ಹಿಮಪಾತವಾಗುತ್ತಿದ್ದು, ಪ್ರತಿ ದಿನ ಒಬ್ಬರಲ್ಲ ಒಬ್ಬರು ಸಾವನ್ನಪ್ಪುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ಜಾಗ್ರತೆ ವಹಿಸುವ ಅವಶ್ಯಕವಿದೆ. ಇಲ್ಲದಿದ್ದರೆ, ಇದೇ ರೀತಿ ಮತ್ತಷ್ಟು ಯೋಧರ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿರುತ್ತದೆ ಎಂದು ಹೇಳಿದ್ದಾರೆ. 
ಸಿಯಾಚಿನ್ ನಲ್ಲಿ ಫೆ.3 ರಂದು ಸಂಭವಿಸಿದ ಭೀಕರ ಹಿಮಪಾತಕ್ಕೆ ಭಾರತದ 10 ಯೋಧರು ಮೃತಪಟ್ಟಿದ್ದರು. ಮೃತಪಟ್ಟವರಲ್ಲಿ ಮೂವರು ಕರ್ನಾಟಕದ ಯೋಧರಾಗಿದ್ದು, ಮೂವರಲ್ಲಿ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದೀಗ ನಾಗೇಶ್ ಹಾಗೂ ಮಹೇಶ್ ಅವರ ಮೃತದೇಹಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಈ ಇಬ್ಬರು ಯೋಧರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.