ಭದ್ರತಾ ಪಡೆ ಎನ್ ಕೌಂಟರ್ ಗೆ ಜಾರ್ಖಂಡ್ ನಲ್ಲಿ ನಾಲ್ವರು ನಕ್ಸಲರು ಬಲಿ
ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ...

ರಾಂಚಿ: ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ರಾತ್ರಿ ನವಾದಿಹ್ ಅರಣ್ಯದ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ರಾಂಚಿಯಿಂದ 35 ಕಿಲೋ ಮೀಟರ್ ದೂರದ ರಾಂಚಿ–ಜೆಮ್‌ಶ್ಷೆಡ್‌ಪುರ ರಾಷ್ಟ್ರೀಯ ಹೆದ್ದಾರಿ 33ರಲ್ಲಿರುವ ಘಗ್ರಾಬೆಡಾ ಗ್ರಾಮದಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಗ್ರಾಮೀಣ ವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜಕುಮಾರ್ ಲಕ್ರಾ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಅರಣ್ಯದಲ್ಲಿ ನಕ್ಸಲರು ಸೇರಿರುವ ಕುರಿತು ಖಚಿತ ಸುಳಿವಿನ ಮೇರೆಗೆ ಜಿಲ್ಲಾ ಸಶಸ್ತ್ರ ಹಾಗೂ ಸಿಆರ್‌ಪಿಎಫ್ ಸೇರಿಕೊಂಡು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ ಎಂದು ಲಕ್ರಾ ಅವರು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ತಲಾ ಎರಡು ಎಸ್‌ಎಲ್‌ಆರ್‌ಗಳು ಹಾಗೂ 303 ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


