15 ಜಿಲ್ಲೆಗಳಲ್ಲಿ 2ನೇ ಹಂತದ ಪಂಚಾಯತ್ ಚುನಾವಣೆ: ಮತದಾನ ಆರಂಭ, ಮಾರಾಮಾರಿ
15 ಜಿಲ್ಲೆಗಳಲ್ಲಿ ಎರಡನೇ ಹಂತದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು...

ಬೆಂಗಳೂರು: 15 ಜಿಲ್ಲೆಗಳಲ್ಲಿ ಎರಡನೇ ಹಂತದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಕೆಲವೆಡೆ ಘರ್ಷಣೆಗಳು ಸಂಭವಿಸಿವೆ ಎಂದು ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5 ಕಡೆಗಳಲ್ಲಿ ಮತದಾನಕ್ಕೆ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ.
ಹದಿನೈದು ಜಿಲ್ಲಾ ಪಂಚಾಯಿತಿಯ 530 ಕ್ಷೇತ್ರಗಳು ಹಾಗೂ 80 ತಾಲೂಕು ಪಂಚಾಯಿತಿಯ 1936 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 8616 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಎಲ್ಲೆಲ್ಲಿ ಮತದಾನ:
ಮಂಡ್ಯ, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ಬಳ್ಳಾರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಯಾದಗಿರಿ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಸೇರಿ 15 ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


