ರೋಹಿತ್, ಜೆ ಎನ್ ಯು ಪ್ರಕರಣ: ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಹುಲ್ ಮತ್ತು ಕೇಜ್ರಿವಾಲ್
ಒಂದೇ ವಾರದಲ್ಲಿ ನಡೆದ ಎರಡನೇ ಪ್ರಭಟನೆಯಲ್ಲಿ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ ಕುಮಾರ್ ಬಂಧನ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ...

ನವದೆಹಲಿ: ಒಂದೇ ವಾರದಲ್ಲಿ ನಡೆದ ಎರಡನೇ ಪ್ರಭಟನೆಯಲ್ಲಿ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ ಕುಮಾರ್ ಬಂಧನ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಗೆ ಕಾರಣರಾದವನ್ನು ವಿರೋಧಿಸಿ ನಡೆದ ದೆಹಲಿ ರ್ಯಾಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ದೆಹಲಿಯ ಜಂಡೆವಾಲನ್ ನ ಅಂಬೇಡ್ಕರ್ ಭವನದಿಂದ ಜಂತರ್ ಮಂತರ್ ವರೆಗೆ ಪ್ರತಿಭಟನೆ ನಡಿಗೆಯ ರ್ಯಾಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಭಾಗಿಯಾಗಿದ್ದರು. ವಿದ್ಯಾರ್ಥಿಗಳು ಕನ್ಹಯ ಬಂಧನ ಮತ್ತು ರೋಹಿತ್ ಆತ್ಮಹತ್ಯಾ ಪ್ರಕರಣಗಳಲ್ಲಿ ನ್ಯಾಯ ಒದಗಿಸುವಂತೆ ಘೋಷಣೆ ಕೂಗಿದ್ದಾರೆ.
ದೆಹಲಿಯ ಜೆ ಎನ್ ಯು, ದೆಹಲಿ ವಿಶ್ವವಿದ್ಯಾಲಯ, ಜಮೀಲಾ ಮಿಲಿಯಾ ಮತ್ತು ಅಂಬೇಡ್ಕರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೂಡ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ರೋಹಿತ್ ಅವರ ತಾಯಿ ರಾಧಿಕಾ ಮತ್ತು ಸಹೋದರ ರಾಜಾ ಕೂಡ ಪಾಲ್ಗೊಂಡಿದ್ದರು. ಮೋದಿ ಸರ್ಕಾರ ಮತ್ತು ಆರ್ ಎಸ್ ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಾ ವಿಶ್ವವಿದ್ಯಾಲಯದಲ್ಲಿ ವಿರೋಧದ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಹತ್ತಿಕ್ಕಲು ಸಂಚು ನಡೆಸಿದ್ದಾರೆ ಎಂದು ದೂರಿದ್ದಾರೆ.
ಇದೇ ವೇಳೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಮಾತನಾಡಿ ವಿಶ್ವವಿದ್ಯಾಲಯಗಳಲ್ಲಿ ಆರ್ ಎಸ್ ಎಸ್ ಸಿದ್ಧಾಂತ ಒಪ್ಪದ ವಿದ್ಯಾರ್ಥಿಗಳನ್ನು ಕೇಂದ್ರ ಹತ್ತಿಕ್ಕುತ್ತಿದೆ ಎಂದು ದೂರಿದ್ದಾರೆ. ಯುವಕರನ್ನಷ್ಟೇ ಅಲ್ಲ, ಕೇಂದ್ರ ಸರ್ಕಾರ ಆದಿವಾಸಿಗಳು, ದಲಿತರು ಮತ್ತು ದುರ್ಬಲ ಸಮುದಾಯಗಳನ್ನು ಕೂಡ ತುಳಿಯುತ್ತಿದೆ ಎಂದು ಆರೋಪಿಸಿದ್ದಾರೆ.
ಅರವಿಂದ ಕೇಜ್ರಿವಾಲ್ ಮಾತನಾಡಿ "ಕೇಂದ್ರ ಸರ್ಕಾರ ದೇಶದಾದ್ಯಂತ ವಿದ್ಯಾರ್ಥಿಗಳ ಜೊತೆ ಯುದ್ಧಕ್ಕೆ ಇಳಿದಿದೆ. ಮೋದಿ ತಮ್ಮ ರೀತಿಗಳನ್ನು ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಲಿದ್ದಾರೆ" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


