ಪಂಚಾಯತ್ ಫಲಿತಾಂಶ: ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ದೆಹಲಿಗೆ ದೌಡು
ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗೃಹ...

Published On :
ಬೆಂಗಳೂರು: ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ.
ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಪರಮೇಶ್ವರ ಅವರು ದೆಹಲಿಗೆ ಪ್ರಯಾಣ ಬೆಳಸಿದ್ದು, ಚುನಾವಣೆ ಫಲಿತಾಂಶದ ಬಗ್ಗೆ ಸಂಪೂರ್ಣ ವಿವರಣೆ ನೀಡಲಿದ್ದಾರೆ.
ಇನ್ನೂ ದೆಹಲಿಗೆ ತೆರಳುವ ಮುನ್ನ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹಲವು ಕ್ಷೇತ್ರಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಅಂತಹ ಕ್ಷೇತ್ರಗಳಲ್ಲಿ ಬಿಜೆಪಿ ಹೊರತಾದ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದರು. ಅಲ್ಲದೆ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ನಾಯಕರಿಗೆ ಅಧಿಕಾರ ನೀಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


