ನೆರೆಯವನ ಪೈಶಾಚಿಕ ಕೃತ್ಯ; ಪಂಜಾಬಿನಲ್ಲಿ ಅಪ್ರಾಪ್ತೆಯ ರೇಪ್ ಮತ್ತು ಸಜೀವ ದಹನ
ಪಂಜಾಬಿನ ಶೆರ್ಪುರ್ ಪ್ರದೇಶದಲ್ಲಿ ನೆರೆಯವನೇ ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು

ಲುಧಿಯಾನ: ಪಂಜಾಬಿನ ಶೆರ್ಪುರ್ ಪ್ರದೇಶದಲ್ಲಿ ನೆರೆಯವನೇ ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ನೆರೆಯ ನಿವಾಸಿ ಸುನಿಲ್ ನೆನ್ನೆ ರಾತ್ರಿ ಬಾಲಕಿಯನ್ನು ರೇಪ್ ಮಾಡಿದ್ದು, ತನ್ನ ಪೋಷಕರಿಗೆ ವಿಷಯ ತಿಳಿಸುವುದಾಗಿ ಆಕೆ ಹೇಳಿದಾಗ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸ್ ಅಧಿಕಾರಿ ಸುರಿಂದರ್ ಮೋಹನ್ ಹೇಳಿದ್ದಾರೆ.
ಕೆಲಸಗಾರನ ಮಗಳಾದ ಈ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದರೂ, ಶೇಕಡಾ ೯೦ ಪ್ರತಿಶತ ದೇಹ ಸುಟ್ಟಿದ್ದರಿಂದ ಕೊನೆಯುಸಿರೆಳೆದಿದ್ದಾರೆ ಎಂದು ಮೋಹನ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಸುನಿಲ್ ನ ಶೋಧನೆಯಲ್ಲಿ ತೊಡಗಿದ್ದಾರೆ ಪೊಲೀಸರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


