2018 ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರ ಕೈಬಿಡಲಿದ್ದಾರೆ ಸಿಎಂ ಸಿದ್ದರಾಮಯ್ಯ?
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ತವರೂರು ಮೈಸೂರಿನಲ್ಲಿ ಸೋಲು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ...

ಮೈಸೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ತವರೂರು ಮೈಸೂರಿನಲ್ಲಿ ಸೋಲು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ.
1983-2006 ರ ವರೆಗೂ ವರುಣ ಕ್ಷೇತ್ರವನ್ನು ಪ್ರತಿನಿಧಿನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹಿಂದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ನಂತರ ವರುಣ ಕ್ಷೇತ್ರದಲ್ಲಿ ತಮ್ಮ ಮಗನನ್ನು ನಿಲ್ಲಿಸಿ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಲು ಆರಂಭಿಸಿದ್ದರು. ಇದರಂತೆ ಈ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಹಳ್ಳಿಯ ಜನರಿಗೆ ಕಾವೇರಿ ಕುಡಿಯುವ ನೀರು ಯೋಜನೆಯನ್ನು ಜಾರಿ ಮಾಡಿದ್ದರು.
ಇದೀಗ ಇತ್ತೀಚೆಗೆ ನಡೆದ ಚುನಾವಣೆ ಮುಖ್ಯಮಂತ್ರಿಯವರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಜೆಡಿಎಸ್ 8 ರಲ್ಲಿ 6 ಸ್ಥಾನಗಳನ್ನು ಹಾಗೂ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ 98ರಲ್ಲಿ 19 ಸ್ಥಾನಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿತ್ತು. ಕಾಂಗ್ರೆಸ್ 13 ಸ್ಥಾನಗಳನ್ನು ಪಡೆಯುವಲ್ಲಿ ಸಫಲವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


