ಪ್ರಧಾನ ಸುದ್ದಿ

ಬೆಳಗಾವಿಗೆ ಮೋದಿ ಆಗಮನ: ಹೆಚ್ಚಿದ ಭದ್ರತೆ

ತೀವ್ರ ಸಂಕಷ್ಟವನ್ನು ಎದುರುಸುತ್ತಿರುವ ರೈತ ಸಮುದಾಯಕ್ಕೆ ಆತ್ಮಸ್ಥೈರ್ಯ ತುಂಬುವ ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ...

ಬೆಳಗಾವಿಗೆ ಮೋದಿ ಆಗಮನ: ಹೆಚ್ಚಿದ ಭದ್ರತೆ
ಬೆಳಗಾವಿಗೆ ಮೋದಿ ಆಗಮನ: ಹೆಚ್ಚಿದ ಭದ್ರತೆ
Published On :

ಬೆಳಗಾವಿ: ತೀವ್ರ ಸಂಕಷ್ಟವನ್ನು ಎದುರುಸುತ್ತಿರುವ ರೈತ ಸಮುದಾಯಕ್ಕೆ ಆತ್ಮಸ್ಥೈರ್ಯ ತುಂಬುವ ಫಸಲ್ ಬಿಮಾ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮದಕ್ಕೆ ಚಾಲನೆ ನೀಡಲು ಮೋದಿಯವರು ಬೆಳಗಾವಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮ ಇಂದು ಸಂಜೆ 4 ಗಂಟೆಗೆ ಆರಂಭವಾಗಲಿದ್ದು, ಸಾವಗಾಂವದ ಅಂಗಡಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಿದ್ದು, ಈಗಾಗಲೇ 2,500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಇದರಂತೆ ನೆನೆಗುದಿಗೆ ಬಿದ್ದಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿಚಾರ ಕುರಿತಂತೆ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ಹಲವು ಸಂಘಟನೆಗಳು ಮೋದಿ ಭೇಟಿ ಕುರಿತಂತೆ ಜಿಲ್ಲಾಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಕಾರ್ಯಕ್ರಮಕ್ಕಾಗಿ ಸಾಂವಗಾಂವ್ ನ ಮೈದಾನದಲ್ಲಿ ಬೃಹತ್ ವೇದಿಕೆಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಲಕ್ಷಕ್ಕೂ ಅಧಿಕ ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ ಕುಮಾರ್, ಸದಾನಂದಗೌಡ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಪ್ರಧಾನಮಂತ್ರಿ ಮೋದಿಯವರ ಕಾರ್ಯಕ್ರಮಗಳ ಪಟ್ಟಿ

  • ಮಧ್ಯಾಹ್ನ 1.25ಕ್ಕೆ ರಾಜಧಾನಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಯಾಣ
  • ನಂತರ 3.55ಕ್ಕೆ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಆಗಮನ
  • ಸಂಜೆ 4 ಗಂಟೆ ಸೇನಾಪಡೆ ಹೆಲಿಕಾಪ್ಟರ್ ಮೂಲಕ ಸಾಂವಗಾಂವ್ ಗೆ ಪ್ರಯಾಣ
  • 4.20ಕ್ಕೆ ಕಾರ್ಯಕ್ರಮದ ಸ್ಥಳಕ್ಕೆ ಆಗಮನ
  • 4.30ರಿಂದ 5.30ರವರೆಗೆ ರೈತರನ್ನು ಉದ್ದೇಶಿಸಿ ಭಾಷಣ
  • 5.35ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದತ್ತ ಪ್ರಯಾಣ
  • 6.10ಕ್ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ ಮರು ಪ್ರಯಾಣ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.