ಪ್ರಧಾನ ಸುದ್ದಿ

ನಿತೀಶ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಅವರಿಗೆ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,

ನಿತೀಶ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
Published On :

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಅವರಿಗೆ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸುದೀರ್ಘ ಮತ್ತು ಸಂತಸಮಯ ಜೀವನ ಅವರದಾಗಲಿ ಎಂದು ಹಾರೈಸಿದ್ದಾರೆ.

"ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘ ಕಾಲದ ಆರೋಗ್ಯಮಯ ಜೀವನವನ್ನು ಹರಸುತ್ತೇನೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಕೂಡ ಮುಖ್ಯಮಂತ್ರಿಯವರ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು, ಮೋದಿ ೨೦೧೬-೧೭ರ ಸಾಮಾನ್ಯ ಬಜೆಟ್ ನಲ್ಲಿ ನಪಾಸಾಗಿದ್ದಾರೆ ಮತ್ತು ಇದು ನಿರಾಶಾದಾಯಕ ಬಜೆಟ್ ಎಂದು ನಿತೀಶ್ ಹೇಳಿದ್ದರು.

"ರೈತರ, ಕೃಷಿಯ ಅಭಿವೃದ್ಧಿ ಬಗೆಗೆ ಮಾತನಾಡುತ್ತಿದ್ದಾರೆ, ಆದರೆ ಯಾವುದೂ ನಿಖರವಾಗಿಲ್ಲ. ಅವರು ೨೦೧೪ ರ ಚುನಾವಣಾ ಸಮಯದಲ್ಲಿ ಹೇಳಿದ್ದಂತೆ, ಕನಿಷ್ಠ ಬೆಂಬಲ ಬೆಲೆಯನ್ನು ೫೦% ಹೆಚ್ಚಿಸುತ್ತಾರೆ ಎಂಬ ನಿರೀಕ್ಷೆಯಿತ್ತು. ಇದು ಅವರ ಆಡಳಿತದ ಮೂರನೆ ವರ್ಷ. ಹೀಗಿದ್ದು ಅವರು ನೀಡಿದ್ದ ಭರವಸೆಯನ್ನು ಪೂರೈಸಿಲ್ಲ" ಎಂದು ನಿತೀಶ್ ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.