ಮೈಸೂರಿನಲ್ಲಿ ಎಸ್‌ಜಿಎಸ್ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ
ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೈಸೂರಿನಲ್ಲಿ ಎಸ್‌ಜಿಎಸ್ ಆಸ್ಪತ್ರೆ ಉದ್ಘಾಟಿಸಿದರು.

Published On :
ಮೈಸೂರು: ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೈಸೂರಿನಲ್ಲಿ ಎಸ್‌ಜಿಎಸ್ ಆಸ್ಪತ್ರೆ ಉದ್ಘಾಟಿಸಿದರು.
ಇಲ್ಲಿನ ಗೌರಿಶಂಕರನಗರದಲ್ಲಿರುವ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ಎಸ್‌ಜಿಎಸ್ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಮೋದಿ, ಇಲ್ಲಿಗೆ ಬಂದಿದ್ದಕ್ಕೆ ನನಗೆ ತುಂಬಾ ಸಂತಸವಾಗಿದೆ. ದತ್ತಪೀಠದ ಆರ್ಶೀವಾದ ಪಡೆದ ಖುಷಿ ಇದೆ ಎಂದರು.
ಭಾರತದ ಸಂತ, ಮಹಾತ್ಮರ ಬಗ್ಗೆ ನನಗೆ ಅಪಾರ ಗೌರವವಿದೆ ಪ್ರಧಾನಿ ಹೇಳಿದರು.
ಬಳಿಕ ಮಹಾರಾಜ ಕಾಲೇಜ್ ಮೈದಾನಕ್ಕೆ ಪ್ರಧಾನಿ ತೆರಳಿದ್ದು, ಅಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಾಳೆ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಲಿದ್ದಾರೆ.
ಇಂದು ಸಂಜೆ 5ಗಂಟೆಯ ಸುಮಾರಿಗೆ ದೆಹಲಿಯಿಂದ ನೇರವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


