ಕೆಐಎಡಿಬಿ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಟುಂಬದ ಸದಸ್ಯರ ಆಸ್ತಿ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ ಆದೇಶ ರದ್ದು ಗೊಳಿಸುವಂತೆ ಕೋರಿ...

ಬೆಂಗಳೂರು: ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಟುಂಬದ ಸದಸ್ಯರ ಆಸ್ತಿ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ ಆದೇಶ ರದ್ದು ಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವಾದ-ಪ್ರತಿವಾದ ಆಲಿಸಿದ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ತೀರ್ಪು ಕಾಯ್ದಿರಿಸಿತು. ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಆಧರಿಸಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಪತ್ನಿ ಸೌಭಾಗ್ಯ ನಾಯ್ಡು, ಪುತ್ರಿ ಜಲಜಾ, ಅಳಿಯ ಜಗದೀಶ್ ಚಂದ್ರ ಪ್ರಕಾಶ್ ಹಾಗೂ ಅವರ ಮಾಲೀಕತ್ವದ ಇಟಾಸ್ಕ ಕಂಪನಿ ಎಂಡಿ ಶ್ರೀನಿವಾಸ್ಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳಲು ಜಾರಿ ನಿರ್ದೇಶನಾಲಯ 2013ರ ಫೆ.23ರಂದು 87 ಪುಟಗಳ ಆದೇಶ ಹೂಡಿತ್ತು.
ಈ ಆದೇಶ ರದ್ದು ಕೋರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತವರ ಕುಟುಂಬ ಸದಸ್ಯರು 2013ರ ಮಾ.30ರಂದು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಏ.4 ರಂದು ಜಾರಿ ನಿರ್ದೇಶಾನಾಲಯದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


