ಲಂಕಾ ನೌಕಾಪಡೆಯಿಂದ 12 ಮಂದಿ ಭಾರತೀಯ ಮೀನುಗಾರರ ಬಂಧನ
ಶ್ರೀಲಂಕಾ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪ ಮೇಲೆ ಲಂಕಾ ನೌಕಾಪಡೆ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ...

ಚೆನ್ನೈ: ಶ್ರೀಲಂಕಾ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪ ಮೇಲೆ ಲಂಕಾ ನೌಕಾಪಡೆ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ.
ತಮಿಳುನಾಡು ಮೂಲದ ಸುಮಾರು 12 ಮಂದಿ ಮೀನುಗಾರರನ್ನು ಸಮುದ್ರ ಗಡಿ ನಿಯಮ ಉಲ್ಲಂಘನೆ ಆರೋಪದಡಿ ಶ್ರೀಲಂಕಾ ನೌಕಾಪಡೆ ಮಂಗಳವಾರ ಬೆಳ್ಳಂಬೆಳಗ್ಗೆ ಬಂಧಿಸಿದೆ ಎಂದು ತಿಳಿದುಬಂದಿದೆ. ಲಂಕಾದ ಕಚ್ಛಾತೀವು ಸಮುದ್ರ ಗಡಿಯಲ್ಲಿ 12 ಮಂದಿ ಮೀನುಗಾರರು ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದರು ಎಂದು ಲಂಕಾ ನೌಕಾಪಡೆ ಆರೋಪಿಸಿದೆ.
ಮೂಲಗಳ ಪ್ರಕಾರ ಬಂಧಿತ 12 ಮಂದಿಯ ಪೈಕಿ 8 ಮಂದಿ ರಾಮೇಶ್ವರಂ ಪ್ರದೇಶಕ್ಕೆ ಸೇರಿದವರಾಗಿದ್ದು, ಉಳಿದ ಇಬ್ಬರು ಪುದುಕೋಟೈನಲ್ಲಿರುವ ಜಗಡಪಟ್ಟಿನಂ ಜಿಲ್ಲೆಗೆ ಸೇರಿದವರು ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಗೋಪಿನಾಥ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಮೀನುಗಾರಿ ನಡೆಸುತ್ತಿದ್ದ ಮೂರು ಬೋಟ್ ಗಳನ್ನು ಮತ್ತು ಅದರಲ್ಲಿದ್ದ ಸಿಬ್ಬಂದಿಗಳನ್ನು ಬಂಧಿಸಿದ್ದು, ತಲೈಮನ್ನೂರಿಗೆ ಕೊಂಡೊಯ್ದು ಅಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವುದಾಗಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


