2ನೇ ಅವಧಿಗೂ ಬಿಜೆಪಿ ಅಧ್ಯಕ್ಷರಾಗಿ ಅಮಿತ್ ಶಾ ಆಯ್ಕೆ ಸಾಧ್ಯತೆ
ಇತ್ತೀಚಿಗಷ್ಟೇ ಮುಕ್ತಾಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯ ಸೋಲಿನ ಹೊರತಾಗಿಯೂ ಅಮಿತ್ ಶಾ ಅವರು ಎರಡನೇ ಅವಧಿಗೂ...

Published On :
ನವದೆಹಲಿ: ಇತ್ತೀಚಿಗಷ್ಟೇ ಮುಕ್ತಾಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯ ಸೋಲಿನ ಹೊರತಾಗಿಯೂ ಅಮಿತ್ ಶಾ ಅವರು ಎರಡನೇ ಅವಧಿಗೂ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಈ ತಿಂಗಳ ಅಂತ್ಯಕ್ಕೆ ಅಮಿತ್ ಶಾ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡುವದರೊಂದಿಗೆ ಕೆಲವು ಹೊಸಬರಿಗೆ ಪಕ್ಷದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.
ಮಾಧ್ಯಮಗಳ ವರದಿಯ ಪ್ರಕಾರ, ಕಳಪೆ ಪ್ರದರ್ಶನ ನೀಡಿದ ಕನಿಷ್ಠ ಒಬ್ಬ ಸಚಿವರು ಸೇರಿದಂತೆ ಕೆಲವು ಹೊಸಬರನ್ನು ಅಮಿತ್ ಶಾ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.
ಇನ್ನು ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಬಿಹಾರ ಚುನಾವಣೆಯ ಸೋಲಿನ ನಂತರ ಇದು ಅಮಿತ್ ಶಾ ಅವರಿಗೆ ದೊಡ್ಡ ಸವಾಲು ಆಗಿದೆ. ಹೀಗಾಗಿ ಉತ್ತರ ಪ್ರದೇಶ ಬಿಜೆಪಿ ಘಟಕಕ್ಕೆ ತಮ್ಮ ಆಪ್ತರನ್ನು ತರಲು ಶಾ ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


