ನೂತನ ವಿಧಾನಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ
ಸ್ಥಳೀಯ ಸಂಸ್ಥೆಗಳಿಂದ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ವಿಧಾನ ಪರಿಷತ್ ನ 25 ಸದಸ್ಯರ ಅವಧಿಯು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದ್ದು, ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ...

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ವಿಧಾನ ಪರಿಷತ್ ನ 25 ಸದಸ್ಯರ ಅವಧಿಯು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದ್ದು, ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ನೂತನ ವಿಧಾನ ಪರಿಷತ್ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಶಾಶ್ವತ ಶಾಸನಸಭೆ ಎಂದೇ ಕರೆಯುವ ವಿಧಾನ ಪರಿಷತ್ತಿನಿಂದ ಪ್ರತಿ ಆರು ವರ್ಷಕ್ಕೊಮ್ಮೆ ಮೂರನೇ ಒಂದರಷ್ಟು ನಿವೃತ್ತರಾಗಬೇಕೆಂಬ ವಾಡಿಕೆಯಂತೆ 25 ಶಾಸಕರ ಸದಸ್ಯತ್ವವು ಮಂಗಳವಾರ ಮುಕ್ತಾಯವಾಗಿದ್ದು, ಅದೇ ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ನೂತನ 25 ಸದಸ್ಯರ ಅವಧಿಯು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.
ಇದರಂತೆ 25 ಮಂದಿಯ ಪೈಕಿ ಕಾಂಗ್ರೆಸ್ ನ 12, ಬಿಜೆಪಿಯ 6. ಜೆಡಿಎಸ್ ನ 4 ಹಾಗೂ ಇಬ್ಬರು ಪಕ್ಷೇತರರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನುಳಿದಂತೆ ಹಾಲಿ ಶಾಸಕರಾಗಿದ್ದ 25 ಮಂದಿಯಲ್ಲಿ 9 ಮಂದಿ ಪುನರಾಯ್ಕೆಯಾಗಿದ್ದು, ಎಂದಿನಂತೆ ಅವರ ಸದಸ್ಯತ್ವ ಮುಂದುವರೆಯಲಿದೆ.
ಸ್ಥಳೀಯ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯ ರಘು ಆಚಾರ್ ಅವರು ಧನುರ್ಮಾಸದ ಹಿನ್ನೆಲೆಯಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


