ಪ್ರಧಾನ ಸುದ್ದಿ

ಇನ್ಕ್ರೆಡಿಬಲ್ ಇಂಡಿಯಾ: ಆಮಿರ್ ಖಾನ್ ಸ್ಥಾನಕ್ಕೆ ಅಮಿತಾಭ್ ಬಚ್ಚನ್ ಆಯ್ಕೆ

ಗುಜರಾತ್ ಪ್ರವಾಸೋದ್ಯಮದ ರಾಯಭಾರಿಯಾಗಿರುವ ಮೆಗಾಸ್ಚಾರ್ ಅಮಿತಾಭ್ ಬಚ್ಚನ್ ಅವರನ್ನೇ ಈಗ 'ಇನ್ಕ್ರೆಡಿಬಲ್ ಇಂಡಿಯಾ'ದ...

ಇನ್ಕ್ರೆಡಿಬಲ್ ಇಂಡಿಯಾ: ಆಮಿರ್ ಖಾನ್ ಸ್ಥಾನಕ್ಕೆ ಅಮಿತಾಭ್ ಬಚ್ಚನ್ ಆಯ್ಕೆ
ಅಮಿತಾಭ್ ಬಚ್ಚನ್
Published On :
ನವದೆಹಲಿ: ಗುಜರಾತ್ ಪ್ರವಾಸೋದ್ಯಮದ ರಾಯಭಾರಿಯಾಗಿರುವ ಮೆಗಾಸ್ಚಾರ್ ಅಮಿತಾಭ್ ಬಚ್ಚನ್ ಅವರನ್ನೇ ಈಗ 'ಇನ್ಕ್ರೆಡಿಬಲ್ ಇಂಡಿಯಾ'ದ ನೂತನ ಪ್ರಚಾರ ರಾಯಭಾರಿಯನ್ನಾಗಿ ನರೇಂದ್ರ ಮೋದಿ ಸರ್ಕಾರ ನೇಮಕ ಮಾಡಿದೆ.
ಇನ್ಕ್ರೆಡಿಬಲ್ ಇಂಡಿಯಾದ ರಾಯಭಾರಿಯಾಗಿದ ಬಾಲಿವುಡ್ ನಟ ಆಮಿರ್ ಖಾನ್ ಅವರ ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ಈಗ ಅವರ ಸ್ಥಾನಕ್ಕೆ ಅಮಿತಾಭ್ ಬಚ್ಚನ್ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ಕ್ರೆಡಿಬಲ್ ಇಂಡಿಯಾ ರಾಯಭಾರಿ ಸ್ಥಾನಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಅಮಿತಾಭ್ ಅವರನ್ನು ಆಯ್ಕೆ ಮಾಡಲಾಗಿದೆ.
ವರದಿಗಳ ಪ್ರಕಾರ, ಹೊಸ ಜವಾಬ್ದಾರಿ ಸ್ವೀಕರಿಸಿರುವ ಮೆಗಾಸ್ಚಾರ್ ಅಮಿತಾಭ್ ಬಚ್ಚನ್ ಅವರು, ರಾಜ್ಯ, ರಾಷ್ಟ್ರ ಹಾಗೂ ಸಮಾಜಕ್ಕಾಗಿ ಉತ್ತಮ ಕೆಲಸ ಮಾಡಲು ಯತ್ನಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಈ ಮುಂಚೆ ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಮಿರ್ ಖಾನ್ ಅವರನ್ನು ಇನ್ಕ್ರೆಡಿಬಲ್ ಇಂಡಿಯಾ ರಾಯಭಾರಿ ಸ್ಥಾನದಿಂದ ಕೈಬಿಡಲಾಗಿದೆ ಎಂದು ವರದಿ ಮಾಡಲಾಗಿತ್ತು. ಆದರೆ ಅವರ ಒಪ್ಪಂದದ ಅವಧಿಯೇ ಮುಗಿದಿದೆ ಎಂದು ನಂತರ ಪ್ರವಾಸೋದ್ಯಮ ಇಲಾಖೆ ಸ್ಪಷ್ಟಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.