ಪ್ರಧಾನ ಸುದ್ದಿ

ಸ್ಕಾರ್ಪಿಯೋ ಕಾರು ಪಲ್ಟಿ: ಬೆಂಗಳೂರಿನ 7 ಯುವಕರು ದುರ್ಮರಣ

ಪ್ರವಾಸಕ್ಕೆಂದು ತೆರಳಿದ್ದ ಯುವಕರ ಗುಂಪಿನ ಕಾರೊಂದು ಕೆರೆಗೆ ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಯುವಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಶನಿವಾರ ನಡೆದಿದೆ...

ಸ್ಕಾರ್ಪಿಯೋ ಕಾರು ಪಲ್ಟಿ: ಬೆಂಗಳೂರಿನ 7 ಯುವಕರು ದುರ್ಮರಣ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಪ್ರವಾಸಕ್ಕೆಂದು ತೆರಳಿದ್ದ ಯುವಕರ ಗುಂಪಿನ ಕಾರೊಂದು ಕೆರೆಗೆ ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಯುವಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಶನಿವಾರ ನಡೆದಿದೆ.

ಸಾವನ್ನಪ್ಪಿದ್ದ ಯುವಕರು ಬೆಂಗಳೂರಿನ ಹೊರವಲಯದ ಬಿಡದಿಯಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಕಂಪನಿಗೆ ಸೇರಿದ ಉದ್ಯೋಗಿಗಳಾಗಿದ್ದು, ಯುವಕರ ಗುಂಪು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಸ್ಕಾರ್ಪಿಯೋ ಕಾರಿನಲ್ಲಿ ಪ್ರವಾಸಕ್ಕೆಂದು ತೆರಳಿದ್ದರು. ನಿನ್ನೆ ತಡರಾತ್ರಿ ಯುವಕರಿದ್ದ ಕಾರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ಜನಿವಾರ ಗ್ರಾಮದ ಕೆರೆಗೆ ಪಲ್ಟಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಜನಾರ್ದನ್ (22), ಕಾರ್ತಿಕ್ (24), ಸತೀಶ್ (24), ದಿಲೀಪ್ (24), ಜಯಂತ್ (23), ಶಿವಸ್ವಾಮಿ (24), ರಾಜು (24) ಎಂಬುವವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಯುವಕರು ಪಾರಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಕೆರೆಗೆ ಬಿದ್ದಿದ್ದ ಏಳು ಯುವಕರ ಮೃತದೇಹವನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.