ಸಮ-ಬೆಸ ವಾಹನ ಕಡಿವಾಣ ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ದೆಹಲಿ ಹೈಕೋರ್ಟ್ ನಕಾರ
ವಾಯುಮಾಲಿನ್ಯವನ್ನು ತಗ್ಗಿಸಲು ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಜಾರಿಗೆ ತಂದಿರುವ ಸರಿ ಬೆಸ ನೊಂದಣಿ ಸಂಖ್ಯೆ ಆಧಾರದ ಮೇಲೆ ಬದಲಿ ದಿನ ವಾಹನ ಚಲಾಯಿಸದಿರುವ

ನವದೆಹಲಿ: ವಾಯುಮಾಲಿನ್ಯವನ್ನು ತಗ್ಗಿಸಲು ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಜಾರಿಗೆ ತಂದಿರುವ ಸರಿ ಬೆಸ ನೊಂದಣಿ ಸಂಖ್ಯೆ ಆಧಾರದ ಮೇಲೆ ಬದಲಿ ದಿನ ವಾಹನ ಚಲಾಯಿಸದಿರುವ ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
"ಈ ಯೋಜನೆ ಅಸಂವಿಧಾನಿಕ ಅಥವಾ ಕಾನೂನಿನ ಚೌಕಟ್ಟಿಗೆ ಒಳಪಡದ ಹೊರತು ಇದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ" ಎಂದು ಮುಖ್ಯ ನ್ಯಾಯಾಧೀಶೆ ಜಿ ರೋಹಿಣಿ ಮತ್ತು ನ್ಯಾಯಮೂರ್ತಿ ಜಯಂತ್ ನಾಥ್ ಒಳಗೊಂಡ ವಿಭಾಗೀಯ ಪೀಠ ತಿಳಿಸಿದೆ.
ಇದು ವಾಯುಮಾಲಿನ್ಯ ತಗ್ಗಿಸಲು ಪ್ರಯೋಗಾತ್ಮಕವಾಗಿ ೧೫ ದಿನಗಳವರೆಗೆ ಜಾರಿಯಲ್ಲಿರುವ ಯೋಜನೆಯಾಗಿರುವುದರಿಂದ ಈ ಯೋಜನೆಗೆ ಕಡಿವಾಣ ಹಾಕುವ ಯಾವುದೇ ಇರಾದೆ ಇಲ್ಲ ಎಂದು ಕೋರ್ಟ್ ಹೇಳಿದೆ.
ಇನ್ನು ಮುಂದೆ ಇಂತಹ ನಿಯಮಗಳನ್ನು ಜಾರಿಗೆ ತರುವಾಗ ಕೋರ್ಟ್ ಮುಂದಿರುವ ೧೨ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
ಇದಕ್ಕೂ ಮೊದಲು ಕೋರ್ಟ್ ಈ ಯೋಜನೆಯನ್ನು ೧೫ ದಿನಗಳವರೆಗೆ ಜಾರಿ ಮಾಡುವ ಬದಲು ಒಂದು ವಾರಕ್ಕೆ ಸೀಮಿತಗೊಳಿಸಲು ಸಾಧ್ಯವೇ ಎಂದು ರಾಜ್ಯ ಸರ್ಕಾರಕ್ಕೆ ಕೇಳಿತ್ತು. ಆದರೆ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಈ ಯೋಜನೆಯಿಂದ ಸಾಧ್ಯವಾಗಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


