ಜಲ್ಲಿಕಟ್ಟಿಗೆ ಸುಪ್ರೀಂ ತಡೆ: ಪ್ರಧಾನಿಗೆ ಪತ್ರ ಬರೆದ ಜಯಾ, ಸುಗ್ರೀವಾಜ್ಞೆನೆಗೆ ಮನವಿ
ಗೂಳಿ ಪಳಗಿಸುವ ಸಾಂಪ್ರದಾಯಿಕ ಕ್ರೀಡೆ 'ಜಲ್ಲಿಕಟ್ಟು' ಮೇಲಿನ ನಿಷೇಧ ತೆರವುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ...

Published On :
ಚೆನ್ನೈ: ಗೂಳಿ ಪಳಗಿಸುವ ಸಾಂಪ್ರದಾಯಿಕ ಕ್ರೀಡೆ 'ಜಲ್ಲಿಕಟ್ಟು' ಮೇಲಿನ ನಿಷೇಧ ತೆರವುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಜಲ್ಲಿಕಟ್ಟು ಸಾಂಪ್ರದಾಯಿಕ ಕ್ರೀಡೆಯೊಂದಿಗೆ ತಮಿಳರು ಭಾವನಾತ್ಮಕ ಸಂಬಂಧ ಹೊಂದಿದ್ದು, ಅವರ ಭಾವನೆಗಳನ್ನು ಗೌರವಿಸಬೇಕು ಎಂದು ಜಯಾ ಪತ್ರದಲ್ಲಿ ಹೇಳಿದ್ದಾರೆ.
'ಈ ಸಂಬಂಧ ನಾನು 22.12.2015ರಲ್ಲೂ ಒಂದು ಬರೆದಿದ್ದು, ಜಲ್ಲಿಕಟ್ಟಿಗೆ ಅವಕಾಶ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿ ಎಂದು ಮನವಿ ಮಾಡಿದ್ದೆ. ಬಳಿಕ ಕೇಂದ್ರ ಪರಿಸರ, ಅರಣ್ಯ ಸಚಿವಾಲಯ 7.1.2016ರಂದು ಜಟ್ಟಿಕಟ್ಟಿಗೆ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಅದಕ್ಕೆ ತಡೆ ನೀಡಿದ್ದು, ಜನವರಿ 14ರಂದು ಪೊಂಗಲ್ ಹಬ್ಬದ ಅಂಗವಾಗಿ ಜಲ್ಲಿಕಟ್ಟು ಕ್ರೀಡೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈ ತುರ್ತು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು, ಸುಗ್ರೀವಾಜ್ಞೆಯನ್ನು ಹೊರಡಿಸಬೇಕು' ಎಂದು ಜಯಾ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಜಲ್ಲಿಕಟ್ಟು ಕ್ರೀಡೆ ಇಂದು ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ, ತಮಿಳುನಾಡು ಹಾಗೂ ಇತರೆ ರಾಜ್ಯಗಳಿಗೂ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ತಮಿಳುನಾಡಿನ ಜನಪ್ರಿಯ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮತ್ತು ಗುಜರಾತ್, ಹರಿಯಾಣ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಪಂಜಾಬ್ಗಳಲ್ಲಿ ನಡೆಯುವ ಎತ್ತು ಬಂಡಿ ಓಟ ಕ್ರೀಡೆಗಳಿಗೆ ಅವಕಾಶ ನೀಡಿ ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆ ಪ್ರಕಟಣೆ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


