ಪ್ರಧಾನ ಸುದ್ದಿ

ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧ: ಸಿಎಂ ಸಿದ್ದರಾಮಯ್ಯ

ಮುಂದಿನ ತಿಂಗಳು ನಡೆಯಲಿರುವ ರಾಜ್ಯದ ಮೂರು ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ...

ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ರಾಜ್ಯದ ಮೂರು ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರುವ ಉಪ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾವು ಚುನಾವಣೆಗೆ ಎದರುವುದಿಲ್ಲ. ಅದಕ್ಕಾಗಿ ಕಾಯುತ್ತಿದ್ದೇವೆ. ಆದರೆ ಬಿಜೆಪಿ ನಾವು ಹೆದರುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದೆಯಷ್ಟೆ ಎಂದರು.
ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಪರಿಷತ್ ಸದಸ್ಯರು ಸೇರಿದಂತೆ ಅಭ್ಯರ್ಥಿಗಳಾಗಲು ಭಾರಿ ಪೈಪೋಟಿ ನಡೆದಿದೆ ಎಂದು ಸಿಎಂ ತಿಳಿಸಿದರು.ಆದರೂ ಜನವರಿ 20ರೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆಎಂದರು.
ಇನ್ನು ಲೋಕಾಯುಕ್ತ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇನ್ನೆರಡು ದಿನದಲ್ಲಿ ರಾಜ್ಯಪಾಲರಿಗೆ ನೂತನ ಲೋಕಾಯುಕ್ತರ ಹೆಸರು ಶಿಫಾರಸುವುದಾಗಿ ತಿಳಿಸಿದರು. ಇದೇ ವೇಳೆ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿಎಂ, ಪರಮೇಶ್ವರ್ ವಿರುದ್ಧ ಎಸ್.ಟಿ.ಸೋಮಶೇಖರ್ ಯಾಕೆ ಅಸಮಾಧಾನಗೊಂಡಿದ್ದಾರೆ ಎನ್ನುವುದರ ಬಗ್ಗೆ ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.