ಪಠಾಣ್‌ಕೋಟ್ ದಾಳಿ: ಜೈಶ್-ಇ-ಮೊಹಮ್ಮದ್ ವಿರುದ್ಧ ಪಾಕ್ ಕ್ರಮ, 12 ಉಗ್ರರ ಬಂಧನ
ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕಡೆಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ...

Published On :
ಇಸ್ಲಾಮಾಬಾದ್: ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕಡೆಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ 12 ಸದಸ್ಯರನ್ನು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ ಭಾರತಕ್ಕೆ ತನಿಖಾಧಿಕಾರಿಗಳನ್ನು ಕಳುಹಿಸುವ ಸಾಧ್ಯತೆ ಇದೆ.
ಜನವರಿ 2ರಂದು ಪಠಾಣ್‌ಕೋಟ್ ವಾಯುನೆಲೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಉಗ್ರ ಸಂಘಟನೆ ವಿರುದ್ಧ ಕ್ರಮ ತೆಗೆದುಕೊಂಡಿರುವ ಪಾಕ್, ಉಗ್ರ ಸಂಘಟನೆಯ ಕಚೇರಿಗಳನ್ನು ಸಹ ಬುಧವಾರ ಸೀಲ್ ಮಾಡಿದೆ.
ಪಠಾಣ್‌ಕೋಟ್ ದಾಳಿಯ ಹಿಂದೆ ಜೈಶ್-ಇ-ಮೊಹಮ್ಮದ್ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿದ್ದ ಭಾರತ, ಈ ಸಂಬಂಧ ಪಾಕಿಸ್ತಾನಕ್ಕೆ ಕೆಲವು ಸಾಕ್ಷ್ಯಗಳನ್ನು ಸಹ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಪಾಕ್ ತನಿಖಾಧಿಕಾರಿಗಳು ಭಾರತಕ್ಕೆ ಆಗಮಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು, ಪಾಕಿಸ್ತಾನಕ್ಕೆ ದಿಢೀರ್ ಭೇಟಿ ಪ್ರಧಾನಿ ನವಾಜ್ ಷರೀಫ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಬಳಿಕ ಜನವರಿ 15ಕ್ಕೆ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿತ್ತು. ಆದರೆ ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕೈಗೊಳ್ಳುವ ಕ್ರಮದ ಮೇಲೆ ಭಾರತ ಮತ್ತು ಪಾಕ್ ನಡುವಿನ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಬಗ್ಗೆ ನಿರ್ಧಾರವಾಗಲಿದೆ ಎಂದು ಭಾರತ ಖಡಕ್ ಸಂದೇಶ ರವಾನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


