ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: 3 ಅಯ್ಯಪ್ಪ ಭಕ್ತರು ಸಾವು
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು...

ಬಣವಿಕಲ್ಲು(ಬಳ್ಳಾರಿ): ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿದ್ದು, ಒಂಬತ್ತು ಮಂದಿಗೆ ಗಾಯಗಳಾಗಿವೆ.
ಶಬರಿಮಲೆ ಯಾತ್ರೆ ಮುಗಿಸಿ ಬಾಗಲಕೋಟೆ ಜಿಲ್ಲೆಯ ಭಗವತಿಗೆ ವಾಪಸ್ಸಾಗುತ್ತಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಭಗವತಿ ಗ್ರಾಮದ 24 ವರ್ಷದ ಟ್ರ್ಯಾಕ್ಸ್ ಬಸವರಾಜು, ತಿಮ್ಮಣ್ಣ ಹಾಗೂ 30 ವರ್ಷದ ಮುದಕಪ್ಪ ಎಂದು ಗುರುತಿಸಲಾಗಿದೆ.
ಖಾನಹೊಸಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


