ಪ್ರಧಾನ ಸುದ್ದಿ

ಮಸೂದ್ ಅಜರ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಎಂಇಎ

ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್ ಅಜರ್ ಬಂಧನದ ಬಗ್ಗೆ ಪಾಕಿಸ್ತಾನ ಭಾರತಕ್ಕೆ ಯಾವುದೇ ಮಾಹಿತಿ ನೀಡಿಲ್ಲ...

ಮಸೂದ್ ಅಜರ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ಇಲ್ಲ: ಎಂಇಎ
ವಿಕಾಸ್ ಸ್ವರೂಪ್
Published On :
ನವದೆಹಲಿ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್ ಅಜರ್ ಬಂಧನದ ಬಗ್ಗೆ ಪಾಕಿಸ್ತಾನ ಭಾರತಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ವಿದೇಶಾಂಗ ಸಚಿವಾಲಯ(ಎಂಇಎ)ದ ವಕ್ತಾರ ವಿಕಾಸ್ ಸ್ವರೂಪ್ ಅವರು ಗುರುವಾರ ಹೇಳಿದ್ದಾರೆ.
ಅಜರ್‌ನನ್ನು ಬಂಧಿಸಲಾಗಿದೆ ಎಂಬ ಪಾಕ್ ಮಾಧ್ಯಮಗಳ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಸ್ವರೂಪ್, ಮಸೂದ್ ಅಜರ್ ಬಂಧನದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಠಾಣ್‌ಕೋಟ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದಂತೆ ಪಾಕ್ ತೆಗೆದುಕೊಂಡ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಪಾಕ್ ವಿಶೇಷ ತನಿಖಾ ತಂಡ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಸ್ವರೂಪ್ ತಿಳಿಸಿದ್ದಾರೆ.
ಇದೇ ವೇಳೆ ನಾಳೆ ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆಯನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರಸ್ಪರ ಒಪ್ಪಿಗೆಯೊಂದಿಗೆ ಮತ್ತೊಂದು ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಪಠಾಣ್‌ಕೋಟ್ ದಾಳಿಯ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಎಂಇಎ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.