ಪ್ರಧಾನ ಸುದ್ದಿ

ವಿಶ್ವವಿದ್ಯಾಲಯದಿಂದ ಉಚ್ಛಾಟನೆ; ಹೈದರಾಬಾದ್ ದಲಿತ ಸಂಶೋಧಕ ಆತ್ಮಹತ್ಯೆ

ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಿಂದ ೧೨ ದಿನಗಳ ಹಿಂದೆ ಉಚ್ಛಾಟಿತಗೊಂಡಿದ್ದ ಐದು ದಲಿತ ವಿದ್ವಾಂಸರದಲ್ಲಿ ಸೋಮವಾರ ಒಬ್ಬರು ಆತ್ಮಹತ್ಯೆ ಮಾಡಿಕೊಂಡ

ವಿಶ್ವವಿದ್ಯಾಲಯದಿಂದ ಉಚ್ಛಾಟನೆ; ಹೈದರಾಬಾದ್ ದಲಿತ ಸಂಶೋಧಕ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ವಾಂಸ ರೋಹಿತ್ ವೇಮುಲಾ
Published On :

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಿಂದ ೧೨ ದಿನಗಳ ಹಿಂದೆ ಉಚ್ಛಾಟಿತಗೊಂಡಿದ್ದ ಐದು ದಲಿತ ವಿದ್ವಾಂಸರದಲ್ಲಿ ಸೋಮವಾರ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

ಗುಂಟೂರು ಜಿಲ್ಲೆಯ ೨೫ ವರ್ಷದ ರೋಹಿತ್ ವೇಮುಲಾ ಅವರು ಕಳೆದ ಎರಡು ವರ್ಷಗಳಿಂದ ವಿಜ್ಞಾನ ತಂತ್ರಜ್ಞಾನ ಮತ್ತು ಸಾಮಾಜಿಕ ಅಧ್ಯಯನಗಳ ಮೇಲೆ ಸಂಶೋಧನೆ(ಪಿ ಎಚ್ ಡಿ) ಮಾಡುತ್ತಿದ್ದರು. ಕಳೆದ ವರ್ಷ ಎರಡು ವಿದ್ಯಾರ್ಥಿ ಸಂಸ್ಥೆಗಳ ಕಲಹದಲ್ಲಿ ಇವರು ಭಾಗಿಯಾಗಿದ್ದರು.

ಹಲವು ವಿದ್ಯಾರ್ಥಿ ಸಂಘಟನೆಗಳ ಸಹಾಯದಿಂದ, ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ವಾಪಸ್ ತೆಗೆದುಕೊಳ್ಳುವಂತೆ ವಿಶ್ವವಿದ್ಯಾಲಯದ ಆಡಳಿತ ವರ್ಗದ ಮೇಲೆ ಒತ್ತಡ ಹಾಕಿ ಉಚ್ಛಾಟಿತಗೊಂಡಿದ್ದ ಐವರು ವಿದ್ಯಾರ್ಥಿಗಳು ಉಪವಾಸ ಧರಣಿ ನಡೆಸಿದ್ದರು.

ಈ ವಿದ್ಯಾರ್ಥಿಗಳು ಕೇಂದ್ರ ಮಾನವ ಸಂಪನ್ಮೂಲಗಳ ಸಚಿವೆ ಸ್ಮೃತಿ ಇರಾನಿ ಮತ್ತು ಕೇಂದ್ರ ಕಾರ್ಮಿಕ ಮತ್ತು ನೌಕರ ಸಚಿವ ಬಂಗಾರು ದತ್ತಾತ್ರೇಯ ವಿರುದ್ಧ ಕೂಡ ಧರಣಿ ನಡೆಸಿದ್ದರು.

ಈ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಮತ್ತು ಆತಂಕವಾದಿಗಳು ಎಂದಿದ್ದಕ್ಕೆ ಕ್ಷಮೆ ಕೋರುವಂತೆ ದತ್ತಾತ್ರೇಯ ಅವರ ಮೇಲೆ ಒತ್ತಡ ಹೇರಲಾಗಿತ್ತು.

ಈಗ ವೇಮುಲಾ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಹಿನಲೆಯಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ವಿಶ್ವವಿದ್ಯಾಲಯದ ಕೆಲವು ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸುವಂತೆ ಪ್ರತಿಭಟನಕಾರರು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.