೨೦೧೪ ಪ್ರಚೋದನಾಕಾರಿ ಭಾಷಣ ಪ್ರಕರಣದಿಂದ ಅಮಿತ್ ಷಾಗೆ ಕ್ಲೀನ್ ಚಿಟ್
ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು

ಮುಜಫರ್ ನಗರ್: ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಅಧ್ಯಕ್ಷ ಆರೋಪ ಮುಕ್ತ ಎಂದು ಕ್ಲೀನ್ ಚಿಟ್ ನೀಡಿದ್ದಾರೆ.
ಪ್ರಾದೇಶಿಕ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವ ಪೊಲೀಸರು "ಅವರ (ಅಮಿತ್ ಷಾ) ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ" ಎಂದು ತಿಳಿಸಿದ್ದಾರೆ.
ಈಗ ಈ ಅಂತಿಮ ವರದಿ ಮೆಜೆಸ್ಟ್ರೆಟ್ ಎದುರು ಬಂದಿದ್ದು ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದ ಬರ್ವಾರ್ ಗ್ರಾಮದಲ್ಲಿ ಪ್ರಚೋದನಕಾರಿ ಬಾಷಣ ಮಾಡಿದ್ದರು ಎಂದು ಆರೋಪಿಸಿ, ಕಕೋರ್ಲಿ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು. ಆ ಭಾಷಣದಲ್ಲಿ ಷಾ "ಮೋದಿ ಗೆದ್ದರೆ. 'ಮುಲ್ಲಾ' ಮುಲಾಯಂ ಸರ್ಕಾರ ಪತನವಾಗುತ್ತದೆ" ಎಂದಿದ್ದರು ಎಂದು ಆರೋಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


