ಪ್ರಧಾನ ಸುದ್ದಿ

ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಹೈದರಾಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿರುವ ಕೇಜ್ರಿವಾಲ್

ಬಿಜೆಪಿ ಪಕ್ಷ ವಿದ್ಯಾರ್ಥಿ ಸಂಘಟನೆ ಎ ಬಿ ವಿ ಪಿ ಸಂಘಟನೆಯೊಂದಿಗಿನ ಸಂಘರ್ಷದಿಂದ ಮತ್ತು ಕೇಂದ್ರ ಸಚಿವರ ಮಧ್ಯಸ್ತಿಕೆಯಿಂದ ಹೈದರಾಬಾದ್ ವಿಶ್ವವಿದ್ಯಾಲಯದ...

ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಹೈದರಾಬಾದ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿರುವ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಬಿಜೆಪಿ ಪಕ್ಷ ವಿದ್ಯಾರ್ಥಿ ಸಂಘಟನೆ ಎ ಬಿ ವಿ ಪಿ ಸಂಘಟನೆಯೊಂದಿಗಿನ ಸಂಘರ್ಷದಿಂದ ಮತ್ತು ಕೇಂದ್ರ ಸಚಿವರ ಮಧ್ಯಸ್ತಿಕೆಯಿಂದ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಿಂದ ಉಚ್ಛಾಟಿತಗೊಂಡಿದ್ದ ದಲಿತ ವಿದ್ಯಾರ್ಥಿ  ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

೨೫ ವರ್ಷದ ಗುಂಟೂರು ಜಿಲ್ಲಯ ರೋಹಿತ್ ಭಾನುವಾರ ಬೆಳಗ್ಗೆ ಸುಮಾರು ೭:೩೦ಕ್ಕೆ ನೇಣಿಗೆ ಶರಣಾಗಿದ್ದರು. ಇದರಿಂದ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ಎಬಿವಿಪಿ ಸಂಘಟನೆ, ಸಚಿವ ಮತ್ತು ಉಪಕುಲಪತಿಗಳ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ಈ ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪತ್ರ ಬರೆದಿದ್ದ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಮತ್ತು ಉಪಕುಲಪತಿ ಅಪ್ಪ ರಾವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೇ ಸಂದರ್ಭದಲ್ಲಿ ಎಫ್ ಟಿ ಟಿ ಐ ವಿದ್ಯಾರ್ಥಿಗಳು ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ನೆನ್ನೆಯಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.