ಕೇಂದ್ರ ಸರ್ಕಾರದಿಂದ ನೇತಾಜಿ ಮಹತ್ವದ ದಾಖಲೆಗಳ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತ 100 ಕಡತಗಳ ದಾಖಲೆಯನ್ನು ಶನಿವಾರ ಬಿಡುಗಡೆ ಮಾಡಲಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತ 100 ಕಡತಗಳ ದಾಖಲೆಯನ್ನು ಶನಿವಾರ ಬಿಡುಗಡೆ ಮಾಡಲಿದ್ದಾರೆ.
ದಶಕಗಳಿಂದ ನಿಗೂಢವಾಗಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್ ಕಣ್ಮರೆ ರಹಸ್ಯ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ನೇತಾಜಿ ಜನ್ಮದಿನವಾದ ಜ.23ರಂದು ಅವರಿಗೆ ಸಂಬಂಧಿಸಿದ ಕಡತ ಬಿಡುಗಡೆ ಮಾಡುವುದಾಗಿ ಕಳೆದ ವರ್ಷ ಅ.14ರಂದು ಬೋಸ್ ಕುಟುಂಬದ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಅದರಂತೆ ಶನಿವಾರ ಸರ್ಕಾರ ಕಡತ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ.
"ರಾಷ್ಟ್ರೀಯ ದಾಖಲೆಗಳ ಕೇಂದ್ರ (ಎನ್ಐಎ) ನೇತಾಜಿಯವರಿಗೆ ಸಂಬಂಧಿಸಿದ 100 ಕಡತಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಿದೆ. ಡಿಜಿಟಲೀಕರಣ ಮತ್ತು ಇತರ ಕ್ರಮಗಳ ಬಳಿಕ ಅದು ಎಲ್ಲರಿಗೂ ಲಭ್ಯವಾಗಲಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
1945ರಲ್ಲಿ ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿಯೇ ನೇತಾಜಿ ಮೃತಪಟ್ಟಿದ್ದಾಗಿ ಇತ್ತೀಚಿಗಷ್ಟೇ ಬ್ರಿಟನ್ನಿನ ವೆಬ್‌ಸೈಟ್ ವೊಂದು ವರದಿ ಮಾಡಿತ್ತು. ಈ ಸಂಬಂಧ ಅದು ದಾಖಲೆಯನ್ನೂ ಕೂಡ ಬಿಡುಗಡೆ ಮಾಡಿತ್ತು. ಈ ಬೆಳವಣಿಗೆ ನಡುವೆಯೇ ಶನಿವಾರ ಕೇಂದ್ರ ಸರ್ಕಾರ ದಾಖಲೆ ಬಿಡುಗಡೆ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


