ಎಂ.ಚಂದ್ರಶೇಖರ್ ಸೇರಿ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ(ಅಪರಾಧ) ಎಂ. ಚಂದ್ರಶೇಖರ್ ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳಿಗೆ..

Published On :
ನವದೆಹಲಿ: ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ(ಅಪರಾಧ) ಎಂ. ಚಂದ್ರಶೇಖರ್ ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳಿಗೆ ಅವರ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿ ಪದಕ ನೀಡಲಾಗಿದೆ.
ಗಣರಾಜ್ಯೋತ್ಸವದಂದು ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ, ಎಂ.ಚಂದ್ರಶೇಖರ್, ಬೆಂಗಳೂರು ಜಂಟಿ ಆಯುಕ್ತೆ(ಗುಪ್ತದಳ) ಡಿ.ರೂಪಾ, ಮೈಸೂರು ಡಿಸಿಪಿ, ನಾರಾಣಯ ಬಿರ್ಜೆ, ಬೆಂಗಳೂರು ಸಿಸಿಬಿ ಎಸಿಪಿ ಎನ್.ಸಿ.ಶಂಕರಯ್ಯ, ಏರ್‌ಪೋರ್ಟ್ ಉಪ ವಿಭಾಗ ಎಸಿಪಿ ಎಸ್.ಎಚ್. ದುಗ್ಗಪ್ಪ, ಮೈಸೂರು ದೇವರಾಜ ಉಪ ವಿಭಾಗದ ಎಸಿಪಿ ಗಿರಿಜೇಶ್, ಮಂಗಳೂರು ಉತ್ತರ ವಿಭಾಗದ ಎಸಿಪಿ, ಎಂ.ಗಾಂವ್ಕರ್, ಕೆಪಿಎ ಸಹಾಯಕ ನಿರ್ದೇಶಕ ಎಂ.ಎಸ್.ಬುಕ್ಕನವರ್ ಹಾಗೂ ಲೋಕಾಯುಕ್ತ ಡಿವೈಎಸ್‌ಪಿ ಎಸ್.ಡಿ.ವೆಂಕಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ.
ಇನ್ನು ಈಶಾನ್ಯ ವಲಯ ಐಜಿಪಿ ಸುನಿಲ್ ಅಗರವಾರ್ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


